ನವದೆಹಲಿ : ಜವಾಹರಲಾಲ್ ನೆಹರು ವಿಶ್ವವಿದ್ಯಾಲಯು (JNU) ಮತ್ತೆ ರಾಷ್ಟ್ರಮಟ್ಟದಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಲಾಗಿದೆ ಎನ್ನಲಾದ ಆರೋಪಗಳು ಭಾರೀ ರಾಜಕೀಯ ಪ್ರತಿಕ್ರಿಯೆ, ಆಡಳಿತಾತ್ಮಕ ಕ್ರಮ ಮತ್ತು ಪೊಲೀಸ್ ತನಿಖೆಗೆ ಕಾರಣವಾಗಿವೆ.
ಪ್ರಧಾನಿ ಮತ್ತು ಗೃಹ ಸಚಿವರ ಹೆಸರು ಉಲ್ಲೇಖಿಸಿ ಘೋಷಣೆ ;

ವಿಶ್ವವಿದ್ಯಾಲಯ ಆಡಳಿತದ ಪ್ರಕಾರ, 2020ರ ಜನವರಿಯಲ್ಲಿ ನಡೆದ ಹಾಸ್ಟೆಲ್ ದಾಳಿ ಘಟನೆಯ ಹಿನ್ನೆಲೆಯಲ್ಲಿ ಜನವರಿ 5ರ ತಡರಾತ್ರಿ ಜೆಎನ್ ಯು ಆವರಣದಲ್ಲಿ ವಿದ್ಯಾರ್ಥಿಗಳ ಗುಂಪೊಂದು ಪ್ರತಿಭಟನೆ ನಡೆಸಿತು. ಈ ವೇಳೆ ಪ್ರಧಾನಿ ಮತ್ತು ಗೃಹ ಸಚಿವರ ಹೆಸರು ಉಲ್ಲೇಖಿಸಿ ಘೋಷಣೆಗಳನ್ನು ಕೂಗಲಾಗಿದೆ ಎನ್ನಲಾಗಿದೆ. ಈ ಘೋಷಣೆಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ವಿವಾದ ಮತ್ತಷ್ಟು ತೀವ್ರಗೊಂಡಿದೆ.
ಸುಪ್ರೀಂ ಕೋರ್ಟ್ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸರುವುದರ ವಿರುದ್ಧ ವಿದ್ಯಾರ್ಥಿಗಳು, ”ಹಾವುಗಳ ಹೆಡೆಗಳನ್ನು ಪುಡಿಮಾಡಲಾಗುತ್ತಿದೆ ಮತ್ತು ಹಾವುಗಳು ನೋವಿನಿಂದ ನರಳುತ್ತಿವೆ” ಎಂದು ಕೂಗಿದ್ದಾರೆ. ಇದೇ ವೇಳೆ, ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಮಾಧಿಯನ್ನು ಅಗೆಯಲಾಗುವುದು ಎಂದಿದ್ದಾರೆ.
ಇದನ್ನೂ ಓದಿ : Kollamogru : ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರ ವಿಲೀನಕ್ಕೆ ವಿರೋಧ
ಘಟನೆಯನ್ನು ತೀವ್ರವಾಗಿ ಖಂಡಿಸಿರುವ JNU ಆಡಳಿತ ;
ಈ ಪ್ರತಿಭಟನೆ, 2020ರ ದೆಹಲಿ ಗಲಭೆ ಸಂಚು ಪ್ರಕರಣದಲ್ಲಿ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ದಿನ ನಡೆದಿದೆ. ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ನಡೆದ ಪ್ರತಿಭಟನೆಗಳ ಮಧ್ಯೆ ಉತ್ತರ ಪೂರ್ವ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ 53 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ JNU ಆಡಳಿತ, “ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳ ವಿರುದ್ಧ ಅತ್ಯಂತ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದೆ. ದೆಹಲಿ ಪೊಲೀಸರು ದೂರು ಸ್ವೀಕರಿಸಿದ್ದು, ಕಾನೂನು ಸಲಹೆ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಯಾವುದೇ FIR ದಾಖಲಾಗಿಲ್ಲ.
ಘೋಷಣೆಗಳ ವೇಳೆ ಉಪಸ್ಥಿತರಿದ್ದ ವಿದ್ಯಾರ್ಥಿಗಳ ಹೆಸರನ್ನೂ ಉಲ್ಲೇಖಿಸಲಾಗಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

