Breaking News

6 ವರ್ಷದ ಮೊಮ್ಮಗಳ ಮೇಲೆ ಅಜ್ಜನಿಂದಲೇ ಅತ್ಯಾಚಾರ! ಬೆಚ್ಚಿಬೀಳಿಸುವ ಘಟನೆ.

ಭದೋಹಿ (ಉತ್ತರ ಪ್ರದೇಶ): ರಕ್ತ ಸಂಬಂಧಗಳಿಗೇ ಕಳಂಕ ತರುವಂತಹ ಭೀಕರ ಘಟನೆಯೊಂದು ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಕೇವಲ 6 ವರ್ಷದ ಮೊಮ್ಮಗಳ ಮೇಲೆ 58 ವರ್ಷದ ಅಜ್ಜ ಅತ್ಯಾಚಾರ ಎಸಗಿರುವ ಘೋರ ಕೃತ್ಯ ಬೆಳಕಿಗೆ ಬಂದಿದ್ದು, ಇಡೀ ಗ್ರಾಮವೇ ಅಕ್ಷರಶಃ ಬೆಚ್ಚಿಬಿದ್ದಿದೆ.58 ವರ್ಷದ ಆರೋಪಿ ತನ್ನ ಸ್ವಂತ ಮೊಮ್ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಕುಟುಂಬ ಸದಸ್ಯರೇ ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಕೃತ್ಯದ ನಂತರ ಕುಟುಂಬಸ್ಥರು ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಾಗ, ಪರಿಸ್ಥಿತಿಯ ಲಾಭ ಪಡೆದ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದನು.ಘಟನೆ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಚುರುಕುಗೊಳಿಸಿ, ತಲೆಮರೆಸಿಕೊಂಡಿದ್ದ ಅಜ್ಜನನ್ನು ಶುಕ್ರವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ರಿಕ್ಷಾ ಚಾಲಕ ಅರೆಸ್ಟ್

ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *