ಶಿವಮೊಗ್ಗದಲ್ಲಿ ಭೀಕರ ಅಪಘಾತ: ಆ್ಯಂಬ್ಯುಲೆನ್ಸ್ ಹಾಗೂ ಕಾರು ನಡುವೆ ಡಿಕ್ಕಿ

ಶಿವಮೊಗ್ಗ: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದ್ದು, ಸೃವದೈವವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ.

ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಈ ಮೈನವಿರೇಳಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಶಿವಮೊಗ್ಗ ನಗರದ ಅಕ್ಕಮಹಾದೇವಿ ವೃತ್ತ ಈ ಘಟನೆ ನಡೆದಿದೆ.

Advertisement

ಇದನ್ನೂ ಓದಿ: ಹಿಂದೂ ಯುವತಿಯರ ಜೊತೆಗಿದ್ದ ಮುಸ್ಲಿಂ ಬಾಲಕನ ಮೇಲೆ ಹಲ್ಲೆ, ಅಪಹರಣ; ಬಜರಂಗದಳ ಕಾರ್ಯಕರ್ತರ ಮೇಲೆ ದೂರು!

ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆ್ಯಂಬ್ಯುಲೆನ್ಸ್ ಚಾಲಕನ ಕಾಲಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಶಿವಮೊಗ್ಗ ಪೂರ್ವ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು