ದೆಹಲಿ: ಪಶ್ಚಿಮ ಏಷ್ಯಾದಲ್ಲಿ (ಇರಾನ್-ಇಸ್ರೇಲ್) ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಸರ್ಕಾರವು ದೇಶೀಯ ಎಲ್‌ಪಿಜಿ (LPG) ಉತ್ಪಾದನೆಯನ್ನು ಶೇ. 40ರಷ್ಟು ಹೆಚ್ಚಿಸಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.ತೈಲ ಸಂಸ್ಕರಣಾಗಾರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೇಶೀಯ ಎಲ್‌ಪಿಜಿ ಉತ್ಪಾದನೆಯಲ್ಲಿ ಶೇ. 40ರಷ್ಟು ಪ್ರಗತಿ ಸಾಧಿಸಲಾಗಿದೆ.
ದೇಶದ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಮರ್ಪಕವಾಗಿದೆ. ಗ್ರಾಹಕರಿಗೆ ಯಾವುದೇ ರೀತಿಯ ಇಂಧನ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಅಲ್ಲದೆ, ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಮತ್ತು ಸಿಎನ್‌ಜಿ (CNG) ಪೂರೈಕೆಯೂ ಶೇ. 100ರಷ್ಟು ಲಭ್ಯವಿದೆ.

ಭಾರತದ ಎಲ್‌ಪಿಜಿ ಪೂರೈಕೆಯ ಬಹುಪಾಲು ಇರಾನ್ ಯುದ್ಧ ಪೀಡಿತ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೂಲಕ ಹಾದುಬರುತ್ತದೆ. ಈ ಮಾರ್ಗದಲ್ಲಿನ ಅನಿಶ್ಚಿತತೆಯಿಂದಾಗಿ ಪೂರೈಕೆ ಬಗ್ಗೆ ಇನ್ನೂ ಕೆಲವು ಆತಂಕಗಳಿದ್ದು, ಸರ್ಕಾರವು ಪರ್ಯಾಯ ಕ್ರಮಗಳ ಬಗ್ಗೆ ಚಿಂತಿಸುತ್ತಿದೆ.
ಇದನ್ನೂ ಓದಿ: ಪ್ಯಾನ್ ಕಾರ್ಡ್ ಬಳಕೆದಾರರೇ ಎಚ್ಚರ: ಮಾಚ್ 31ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಕಾರ್ಡ್ ರದ್ದಾಗಲಿದೆ!
ಎಲ್‌ಪಿಜಿ ಮೇಲಿನ ಅವಲಂಬನೆ ಕಡಿಮೆ ಮಾಡಲು ಸರ್ಕಾರವು ರಾಜ್ಯಗಳಿಗೆ ವಿಶೇಷ ಆಫರ್ ನೀಡಿದೆ. ಯಾವ ರಾಜ್ಯಗಳು ಪಿಎನ್‌ಜಿ ಸಂಪರ್ಕವನ್ನು ವೇಗಗೊಳಿಸುತ್ತವೆಯೋ ಅಂತಹ ರಾಜ್ಯಗಳಿಗೆ ಶೇ. 10ರಷ್ಟು ಹೆಚ್ಚುವರಿ ಕಮರ್ಷಿಯಲ್ ಎಲ್‌ಪಿಜಿ ಹಂಚಿಕೆ ಮಾಡುವುದಾಗಿ ತಿಳಿಸಿದೆ.ಮಾರ್ಚ್ 17ರ ಅಂಕಿಅಂಶದಂತೆ ಎಲ್‌ಪಿಜಿ ಆನ್‌ಲೈನ್ ಬುಕಿಂಗ್ ಪ್ರಮಾಣ ಶೇ. 93ಕ್ಕೆ ಏರಿಕೆಯಾಗಿದೆ.
ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

