ವಾಹನ ಸವಾರರಿಗೆ ಶಾಕ್! ಪ್ರೀಮಿಯಂ ಪೆಟ್ರೋಲ್ ಬೆಲೆ ದಿಢೀರ್ ಏರಿಕೆ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದ ಪರಿಣಾಮ ಈಗ ನೇರವಾಗಿ ಸಾಮಾನ್ಯ ಜನರ ಜೇಬಿನ ಮೇಲೆ ತಟ್ಟುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ, ಕರ್ನಾಟಕದಲ್ಲಿ ಪ್ರೀಮಿಯಂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಲಾಗಿದೆ.  ಕರ್ನಾಟಕದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಪ್ರೀಮಿಯಂ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಲಾಗಿದೆ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಪ್ರೀಮಿಯಂ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ಗಣನೀಯ ಏರಿಕೆ ಕಂಡುಬಂದಿದೆ. ಸಾಮಾನ್ಯ ಪೆಟ್ರೋಲ್ ಬೆಲೆಯಲ್ಲಿ ಸದ್ಯಕ್ಕೆ ದೊಡ್ಡ ಬದಲಾವಣೆಯಿಲ್ಲದಿದ್ದರೂ, ಪ್ರೀಮಿಯಂ ಇಂಧನ ಬಳಸುವವರಿಗೆ ಹೊರೆಯಾಗಿದೆ.

Advertisement

ಇದನ್ನೂ ಓದಿ: ಇಂಧನ ಬಿಕ್ಕಟ್ಟಿನ ನಡುವೆ ಭಾರತದ ಮಹತ್ವದ ಹೆಜ್ಜೆ: ದೇಶೀಯ ಎಲ್‌ಪಿಜಿ ಉತ್ಪಾದನೆ ಶೇ. 40ರಷ್ಟು ಹೆಚ್ಚಳ

ಇರಾನ್ ಮತ್ತು ಇಸ್ರೇಲ್ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ನಡೆಯುವ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಇರುವುದರಿಂದ ಜಾಗತಿಕವಾಗಿ ತೈಲ ದರಗಳು ಏರುಮುಖವಾಗಿವೆ.ಅಂತರಾಷ್ಟ್ರೀಯ ಮಟ್ಟದ ಏರಿಳಿತಗಳನ್ನು ಸರಿದೂಗಿಸಲು ತೈಲ ಕಂಪನಿಗಳು ಈ ಬೆಲೆ ಏರಿಕೆಯ ನಿರ್ಧಾರ ಕೈಗೊಂಡಿವೆ.

ಸದ್ಯಕ್ಕೆ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸ್ಥಿರವಾಗಿದ್ದರೂ, ಯುದ್ಧದ ತೀವ್ರತೆ ಹೆಚ್ಚಾದರೆ ಅವುಗಳ ಬೆಲೆಯೂ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು