ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ದುರಂತ; ಓರ್ವ ಮೃತ, 9 ಮಂದಿಗೆ ಗಾಯ

charmadi-ghat-accident-tt-vehicle-overturns

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ 10ನೇ ಹೇರ್‌ಪಿನ್ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ಅಪಘಾತದಲ್ಲಿ ಶೇಖರಪ್ಪ (59) ಎಂಬವರು ಮೃತಪಟ್ಟಿದ್ದು, ವಾಹನದಲ್ಲಿದ್ದ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಇವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

Advertisement

ಇದನ್ನೂ ಓದಿ: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಆ್ಯಂಬ್ಯುಲೆನ್ಸ್ ಹಾಗೂ ಕಾರು ನಡುವೆ ಡಿಕ್ಕಿ

ಘಾಟ್ ರಸ್ತೆಯ ಅಪಾಯಕರ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ನಿವಾಸಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು