ಮಂಗಳೂರು: ಬಡಗ ಯಡಪಾಡವು ಗ್ರಾಮದ ಶಾಸ್ತಾವು ದೇವಸ್ಥಾನದ ಸಮೀಪ ಫಾರ್ಚ್ಯೂನರ್ ಕಾರಿನಲ್ಲಿ ಗೋವುಗಳನ್ನು ಕ್ರೂರವಾಗಿ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪರಿವಾಳ ನಿಸಾರ್ ಅಲಿಯಾಸ್ ನಿಸಾರುದ್ದೀನ್ (28) ಮತ್ತು ಮೊಹಮ್ಮದ್ ಜಮಾಲುದ್ದೀನ್ ಅಲಿಯಾಸ್ ಜಮಾಲ್ (24) ಎಂದು ಗುರುತಿಸಲಾಗಿದೆ.

ಮಾರ್ಚ್ 18ರ ಬೆಳಗ್ಗೆ ಸುಮಾರು 4.45ಕ್ಕೆ ಗೋವುಗಳನ್ನು ಕಾಲು ಕಟ್ಟಿ ಕಾರಿನೊಳಗೆ ತುಂಬಿಸಿಕೊಂಡು ಸಾಗಿಸುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ವಾಹನವನ್ನು ತಡೆದು ಪರಿಶೀಲಿಸಿದಾಗ ನಾಲ್ಕು ಗೋವುಗಳನ್ನು ಕ್ರೂರವಾಗಿ ಸಾಗಿಸಲಾಗುತ್ತಿದ್ದದ್ದು ಪತ್ತೆಯಾಗಿತ್ತು. ಈ ವೇಳೆ ಆರೋಪಿಗಳು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದರು.
ಇದನ್ನೂ ಓದಿ: ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ದುರಂತ; ಓರ್ವ ಮೃತ, 9 ಮಂದಿಗೆ ಗಾಯ
ವಾಹನದಲ್ಲಿ ಪತ್ತೆಯಾದ ಕತ್ತಿ ಹಾಗೂ ಕಬ್ಬಿಣದ ರಾಡ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಒಟ್ಟು 8.42 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಪರಾರಿಯಾದ ಇನ್ನಿತರ ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡ ರಚಿಸಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

