ಮೂಡುಬಿದಿರೆ : ಲೈಂಗಿಕ ಕಿರುಕುಳದ ಗಂಭೀರ ಆರೋಪ ಎದುರಿಸುತ್ತಿದ್ದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ (PI) ಸಂದೇಶ್ ಅವರಿಗೆ ಇಲಾಖಾ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ. ಅವರ ಮೇಲೆ ಮಾಡಲಾಗಿದ್ದ ಎಲ್ಲಾ ಮಹಿಳಾ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂಬುದು ತನಿಖೆಯಿಂದ ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬರು ಪಿಐ ಸಂದೇಶ್ ಅವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಇದು ಪೊಲೀಸ್ ವಲಯದಲ್ಲಿ ಮತ್ತು ಸಾರ್ವಜನಿಕವಾಗಿ ಭಾರಿ ಚರ್ಚೆಗೆ ಕಾರಣವಾಗಿತ್ತು.
ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಆಳವಾದ ತನಿಖೆಯಲ್ಲಿ, ದೂರು ನೀಡಿದ ಮಹಿಳೆಯ ಹೇಳಿಕೆಗಳಲ್ಲಿ ಯಾವುದೇ ಸತ್ಯಾಂಶವಿಲ್ಲದಿರುವುದು ಕಂಡುಬಂದಿದೆ. ಸಾಕ್ಷ್ಯಾಧಾರಗಳ ಕೊರತೆ ಮತ್ತು ಘಟನೆಯ ವಿಶ್ವಾಸಾರ್ಹತೆ ಇಲ್ಲದ ಕಾರಣ ಆರೋಪಗಳನ್ನು ತಳ್ಳಿಹಾಕಲಾಗಿದೆ.ತನಿಖೆಯ ಪ್ರಕಾರ, ಪಿಐ ಸಂದೇಶ್ ಅವರನ್ನು ಗುರಿಯಾಗಿಸಿಕೊಂಡು ಅಥವಾ ಯಾವುದೋ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಸುಳ್ಳು ದೂರು ನೀಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ದುರಂತ; ಓರ್ವ ಮೃತ, 9 ಮಂದಿಗೆ ಗಾಯ
ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಸಂದೇಶ್ ಅವರ ಮೇಲೆ ಈ ಕಪ್ಪು ಚುಕ್ಕೆ ಮೂಡಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದರು. ಈಗ ತನಿಖಾ ವರದಿಯು ಅವರಿಗೆ ದೊಡ್ಡ ಸಮಾಧಾನ ತಂದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

