ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಖಾಸಗಿ ಬಸ್ ರಸ್ತೆ ಬದಿಯ ತಡೆಗೋಡೆಗೆ (Fence) ಅಪ್ಪಳಿಸಿದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಅತ್ಯಂತ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಒಂದು ಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ರಾಮನಗರ ಮತ್ತು ಚನ್ನಪಟ್ಟಣದ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ರಾಮನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕ್ರೇನ್ ಬಳಸಿ ಅಪಘಾತಕ್ಕೀಡಾದ ಬಸ್ಸನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ನಿದ್ದೆ ಮಾಡುತ್ತಿದ್ದ ಪತಿ, ಬಂದು ಮರ್ಮಾಂಗಕ್ಕೆ ಒದ್ದ ಪತ್ನಿ! ದೂರು ನೀಡಿದ್ದಕ್ಕೆ ಆತ್ಮಹತ್ಯೆಗೆ ಯತ್ನ
ಪ್ರಾಥಮಿಕ ವರದಿಗಳ ಪ್ರಕಾರ, ಚಾಲಕನ ಅತಿ ವೇಗ ಅಥವಾ ನಿದ್ರೆಯ ಮಂಪರು ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

