ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣ ಈಗ ರಾಜ್ಯಮಟ್ಟದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಸೂಚನೆ ನೀಡಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತೆಯರನ್ನು ಭೇಟಿ ಮಾಡಿ ಮಾಹಿತಿ ಪಡೆದ ನಂತರ ಗೃಹ ಸಚಿವರಿಗೆ ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿಖರ ಸತ್ಯಾಂಶ ಹೊರಬರಲು ಸಿಐಡಿ ತನಿಖೆ ಅಗತ್ಯ ಎಂದು ಸರ್ಕಾರ ನಿರ್ಧರಿಸಿದೆ.ಆರೋಪ ಕೇಳಿಬಂದ ತಕ್ಷಣವೇ ಸಂಬಂಧಪಟ್ಟ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಪಂಗನಾಮ! ಬೆಂಗಳೂರಿನಲ್ಲಿ ವಂಚಕನ ಬಂಧನ

ತನಿಖೆಯ ವೇಳೆ ಇನ್ನು ಎಷ್ಟು ಜನ ಮಹಿಳೆಯರು ಈ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂಬುದು ಬಯಲಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.ಪೊಲೀಸ್ ಇಲಾಖೆಯಲ್ಲೇ ಇದ್ದುಕೊಂಡು ಕಾನೂನು ಬಾಹಿರ ಕೃತ್ಯ ಎಸಗುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು