ಜನವರಿ 28ರಂದು ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಮಾಜಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರೋಹಿತ್ ಪವಾರ್ ಅವರು ದೂರು ನೀಡಿದ್ದು, ಇದು ಆಕಸ್ಮಿಕ ಸಾವಲ್ಲ, ಬದಲಿಗೆ ವ್ಯವಸ್ಥಿತ ಸಂಚು ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಅಮೆರಿಕದಲ್ಲಿ ಸೇವೆಯಿಂದ ನಿವೃತ್ತಿಗೊಂಡಿದ್ದ, ಹಾರಾಟಕ್ಕೆ ಯೋಗ್ಯವಲ್ಲದ ವಿಮಾನವನ್ನು ಭಾರತಕ್ಕೆ ತಂದು ಬಳಸಲಾಗಿತ್ತು. ವಿಮಾನದ ಸುರಕ್ಷಿತ ಮಿತಿ 5,000 ಗಂಟೆಗಳಿದ್ದರೂ, ಸುಮಾರು 8,000 ಗಂಟೆ ಹಾರಾಟ ನಡೆಸಿದ್ದ ದಾಖಲೆಗಳನ್ನು ತಿದ್ದಿ ವಾಣಿಜ್ಯ ಬಳಕೆಗೆ ಬಳಸಲಾಗಿತ್ತು. ವಿಮಾನದ ಪೈಲಟ್ ಸುಮಿತ್ ಕಪೂರ್ ಈ ಹಿಂದೆ ಎರಡು ಬಾರಿ ಮದ್ಯಪಾನ ಮಾಡಿ ಸಿಕ್ಕಿಬಿದ್ದು ಅಮಾನತುಗೊಂಡಿದ್ದರು. ಇಂತಹ ಇತಿಹಾಸವಿದ್ದ ವ್ಯಕ್ತಿಯನ್ನು ಉಪಮುಖ್ಯಮಂತ್ರಿಗಳ ವಿಮಾನಕ್ಕೆ ಪೈಲಟ್ ಆಗಿ ನೇಮಿಸಿದ್ದು ಯಾಕೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಇದನ್ನೂ ಓದಿ: ನಾಯಿ ಪರಚಿದ 6 ತಿಂಗಳ ನಂತರ ರೇಬಿಸ್‌ನಿಂದ 4ನೇ ತರಗತಿ ವಿದ್ಯಾರ್ಥಿನಿ ಸಾವು
ಮೊದಲು ನಿಗದಿಯಾಗಿದ್ದ ಪೈಲಟ್‌ಗಳನ್ನು ಕೊನೆಯ ಕ್ಷಣದಲ್ಲಿ ಬದಲಿಸಿ, ಕಪೂರ್ ಮತ್ತು ತಂಡವನ್ನು ನೇಮಿಸಲಾಗಿತ್ತು. ಅಜಿತ್ ಪವಾರ್ ಅವರು ರಸ್ತೆ ಮೂಲಕ ಹೋಗಬೇಕಿತ್ತು, ಆದರೆ ಕೊನೆ ಕ್ಷಣದಲ್ಲಿ ಅದು ವಿಮಾನ ಪ್ರಯಾಣವಾಗಿ ಬದಲಾಗಿದ್ದು ಹೇಗೆ ಎಂಬ ಸಂಶಯ ವ್ಯಕ್ತವಾಗಿದೆ.
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

