ಮಡಿಕೇರಿ ಸಮೀಪ ಕಾಫಿತೋಟದಲ್ಲಿ ಹುಲಿ ಪ್ರತ್ಯಕ್ಷ: ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ನಗರದಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಇಬ್ಬನಿವಳವಾಡಿ ಗ್ರಾಮದ ಕಾಫಿತೋಟವೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಹುಲಿ ಓಡಾಡುತ್ತಿರುವ ದೃಶ್ಯವು ತೋಟದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ (CCTV) ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಬ್ಬನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಎಂಬುವವರ ಕಾಫಿತೋಟದಲ್ಲಿ ಈ ಹುಲಿ ಕಾಣಿಸಿಕೊಂಡಿದೆ. ಈ ಹಿಂದೆ ಇದು ಹುಲಿಯೋ ಅಥವಾ ಚಿರತೆಯೋ ಎಂಬ ಗೊಂದಲವಿತ್ತು, ಆದರೆ ಈಗ ಅದು ಹುಲಿ ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಖಚಿತಪಟ್ಟಿದೆ. ಮಡಿಕೇರಿ ನಗರಕ್ಕೆ ತೀರಾ ಹತ್ತಿರದಲ್ಲಿಯೇ ಹುಲಿ ಕಾಣಿಸಿಕೊಂಡಿರುವುದರಿಂದ, ಕಾಫಿತೋಟಕ್ಕೆ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು ಮತ್ತು ಗ್ರಾಮಸ್ಥರು ತೋಟಕ್ಕೆ ಹೋಗಲು ಭಯಪಡುತ್ತಿದ್ದಾರೆ.

Advertisement

ಇದನ್ನೂ ಓದಿ: ಬಂಟ್ವಾಳದ ಸಜಿಪನಡು ಮಸೀದಿ ಬಳಿ ರಣರಂಗ: ತಲವಾರ್, ರಾಡ್‌ಗಳಿಂದ ಭೀಕರ ಗುಂಪು ಘರ್ಷಣೆ

ವಿಷಯ ತಿಳಿದ ಕೂಡಲೇ ಮಡಿಕೇರಿ ಡಿಸಿಎಫ್ (DCF) ಅಭಿಷೇಕ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯನ್ನು ಸೆರೆಹಿಡಿಯಲು ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಶಾಸಕ ಮಂತರ್ ಗೌಡ್ ಅವರು ಕೂಡಲೇ ಕಾರ್ಯಾಚರಣೆ ನಡೆಸುವಂತೆ ಸೂಚಿಸಿದ್ದಾರೆ. ಅರಣ್ಯ ಇಲಾಖೆಯು ಗ್ರಾಮಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದು, ಸಂಜೆ ಮತ್ತು ಮುಂಜಾನೆ ವೇಳೆ ಒಬ್ಬಂಟಿಯಾಗಿ ಓಡಾಡದಂತೆ ಸಲಹೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು