ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿ; 10 ಪ್ರಯಾಣಿಕರು ಸಜೀವ ದಹನ

ಮಾರ್ಕಪುರಂ: ಹೈದರಾಬಾದ್‌ನಿಂದ ಪಾಮೂರ್‌ಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಮತ್ತು ಜಲ್ಲಿ ತುಂಬಿದ್ದ ಟಿಪ್ಪರ್ ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ 10 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯ ರಾಯವರಂ ಬಳಿ ನಡೆದಿದೆ.ಹೈದರಾಬಾದ್‌ನಿಂದ ಹೊರಟಿದ್ದ ಹರಿಕೃಷ್ಣ ಟ್ರಾವೆಲ್ಸ್ ಬಸ್‌ಗೆ ಚಿಮಕುರ್ತಿಯಿಂದ ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ.

ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಪೈಕಿ 10 ಮಂದಿ ಹೊರಬರಲಾಗದೆ ಬಸ್‌ನೊಳಗೆ ಸುಟ್ಟು ಕರಕಲಾಗಿದ್ದಾರೆ. ಮೃತರನ್ನು ಕಣಿಗಿರಿ ಮತ್ತು ಪಾಮೂರ್ ನಿವಾಸಿಗಳು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 18 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

Advertisement

ಇದನ್ನೂ ಓದಿ: ಮಕ್ಕಳ ಅಪಹರಣ ಜಾಲದ ಭೀತಿ! ವೈರಲ್ ಆದ ಆ ಒಂದು ವೀಡಿಯೊದಿಂದ ಪೋಷಕರಲ್ಲಿ ಮನೆಮಾಡಿದ ಆತಂಕ

ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ, ಉಳಿದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು