ವಾಹನ ಸವಾರರಿಗೆ ಶಾಕ್: ನಯಾರಾ ಎನರ್ಜಿ ಪೆಟ್ರೋಲ್ 5 ರೂ., ಡೀಸೆಲ್ 3 ರೂ. ಏರಿಕೆ!

ದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ ದೇಶದ ಪ್ರಮುಖ ಖಾಸಗಿ ತೈಲ ಕಂಪನಿ ‘ನಯಾರಾ ಎನರ್ಜಿ’ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 5 ರೂ. ಮತ್ತು ಡೀಸೆಲ್ ಮೇಲೆ 3 ರೂ. ರಷ್ಟು ಬೆಲೆ ಹೆಚ್ಚಳ ಮಾಡಲಾಗಿದೆ.

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಕಚ್ಚಾ ತೈಲ ಪೂರೈಕೆಯಲ್ಲಿ ಅನಿಶ್ಚಿತತೆ ಉಂಟಾಗಿದೆ. ಅಲ್ಲದೆ, ರಷ್ಯಾ ಬೆಂಬಲಿತ ಕಂಪನಿಯಾಗಿರುವ ನಯಾರಾ ಎನರ್ಜಿ, ರಷ್ಯಾ ಮೇಲಿನ ಅಂತರಾಷ್ಟ್ರೀಯ ನಿರ್ಬಂಧಗಳಿಂದಾಗಿಯೂ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದೆ.ಸದ್ಯಕ್ಕೆ ಸರ್ಕಾರಿ ಸ್ವಾಮ್ಯದ ಕಂಪನಿಗಳಾದ IOCL, BPCL ಮತ್ತು HPCL ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ಕಚ್ಚಾ ತೈಲ ಬೆಲೆ ಏರಿಕೆ ಹೀಗೆಯೇ ಮುಂದುವರಿದರೆ ಸರ್ಕಾರಿ ಕಂಪನಿಗಳೂ ಬೆಲೆ ಏರಿಸುವುದು ಅನಿವಾರ್ಯವಾಗಬಹುದು.

Advertisement

ಇದನ್ನೂ ಓದಿ: ಇಂಧನ ಕೊರತೆ ವದಂತಿಗೆ ಕಿವಿಗೊಡಬೇಡಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ದಾಸ್ತಾನು ಸಾಕಷ್ಟಿದೆ

ಗುಜರಾತ್‌ನ ವಾದಿನಾರ್‌ನಲ್ಲಿರುವ ನಯಾರಾ ಎನರ್ಜಿಯ ಬೃಹತ್ ರಿಫೈನರಿಯನ್ನು ಏಪ್ರಿಲ್‌ನಿಂದ 35 ದಿನಗಳ ಕಾಲ ನಿರ್ವಹಣೆಗಾಗಿ ಸ್ಥಗಿತಗೊಳಿಸಲು ಯೋಜಿಸಲಾಗಿದ್ದು, ಇದು ಇಂಧನ ಪೂರೈಕೆಯ ಮೇಲೆ ಮತ್ತಷ್ಟು ಒತ್ತಡ ಹೇರುವ ಸಾಧ್ಯತೆಯಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು