ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರಾ ಮತ್ತು ನಟಿ ಮೊನಾಲಿಸಾ ಭೋಸ್ಲೆ ನಡುವಿನ ಕಿತ್ತಾಟ ಈಗ ಕಾನೂನು ಸಮರದ ರೂಪ ಪಡೆದುಕೊಂಡಿದೆ. ಮೊನಾಲಿಸಾ ಅವರು ನಿರ್ದೇಶಕ ಮಿಶ್ರಾ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದರೆ, ನಿರ್ದೇಶಕರು ಇದನ್ನು ಸಂಪೂರ್ಣವಾಗಿ ಸುಳ್ಳು ಎಂದು ಅಲ್ಲಗಳೆದಿದ್ದಾರೆ.
ನಿರ್ದೇಶಕ ಸನೋಜ್ ಮಿಶ್ರಾ ಅವರು ಚಿತ್ರದ ಅವಕಾಶ ನೀಡುವ ನೆಪದಲ್ಲಿ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮೊನಾಲಿಸಾ ಕೇರಳದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.

ಸನೋಜ್ ಮಿಶ್ರಾ ಅವರು ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮೊನಾಲಿಸಾ ಇತ್ತೀಚೆಗೆ ಫರ್ಮಾನ್ ಖಾನ್ ಎಂಬುವವರನ್ನು ಮದುವೆಯಾಗಿದ್ದು, ಆ ಮದುವೆ ಕಾನೂನುಬದ್ಧವಾಗಿ ಅಮಾನ್ಯವಾಗಿದೆ ಎಂದು ತಾವು ಪ್ರಶ್ನಿಸಿದ್ದಕ್ಕಾಗಿ ಮೊನಾಲಿಸಾ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮಿಶ್ರಾ ಹೇಳಿದ್ದಾರೆ.
ಇದನ್ನೂ ಓದಿ: ಕುಂಭಮೇಳದ ವೈರಲ್ ಸುಂದರಿ ಮೊನಾಲಿಸಾ ಮದುವೆಗೆ ಬಿಗ್ ಟ್ವಿಸ್ಟ್! ಆಕೆ ಇನ್ನೂ ಅಪ್ರಾಪ್ತೆ?
ಮೊನಾಲಿಸಾ ಅವರ ಸುಳ್ಳು ಹೇಳಿಕೆಗಳಿಂದ ತಮ್ಮ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಸನೋಜ್ ಮಿಶ್ರಾ ಅವರು ನಟಿಯ ವಿರುದ್ಧ ಒಂದೆರಡು ದಿನಗಳಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

