ಬೆಂಗಳೂರು: ನಗರದ ಖ್ಯಾತ ಪಿಇಎಸ್ (PES) ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರು ತರಗತಿಯಲ್ಲಿ ವಿದ್ಯಾರ್ಥಿಯೊಬ್ಬರನ್ನು ಉದ್ದೇಶಿಸಿ ಆಕ್ಷೇಪಾರ್ಹವಾಗಿ ‘ಭಯೋತ್ಪಾದಕ’ ಎಂದು ಕರೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಪ್ರೊಫೆಸರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ವರದಿಗಳ ಪ್ರಕಾರ, ತರಗತಿಯ ಅವಧಿಯಲ್ಲಿ ಪ್ರೊಫೆಸರ್ ಮತ್ತು ವಿದ್ಯಾರ್ಥಿಯ ನಡುವೆ ಸಣ್ಣ ವಾಗ್ವಾದ ನಡೆದಿದೆ. ಈ ವೇಳೆ ಪ್ರೊಫೆಸರ್ ಆ ವಿದ್ಯಾರ್ಥಿಯನ್ನು “ಭಯೋತ್ಪಾದಕ” ಎಂದು ಸಂಬೋಧಿಸಿದ್ದಾರೆ ಎನ್ನಲಾಗಿದೆ. ಈ ವಿಷಯವನ್ನು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಂಡಳಿಯು ಆಂತರಿಕ ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ: ನಟಿ ಮೊನಾಲಿಸಾ ಭೋಸ್ಲೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ದೇಶಕ ಸನೋಜ್ ಮಿಶ್ರಾ ಸಿದ್ಧ!
“ನಮ್ಮ ಸಂಸ್ಥೆಯಲ್ಲಿ ಇಂತಹ ತಾರತಮ್ಯ ಅಥವಾ ಅವಹೇಳನಕಾರಿ ಹೇಳಿಕೆಗಳಿಗೆ ಅವಕಾಶವಿಲ್ಲ. ವಿದ್ಯಾರ್ಥಿಗಳ ಘನತೆ ಮತ್ತು ಸುರಕ್ಷತೆ ನಮಗೆ ಮುಖ್ಯ” ಎಂದು ವಿಶ್ವವಿದ್ಯಾಲಯ ತಿಳಿಸಿದೆ. ತನಿಖೆ ಮುಗಿಯುವವರೆಗೆ ಪ್ರೊಫೆಸರ್ ಅವರನ್ನು ಅಮಾನತ್ತಿನಲ್ಲಿಡಲು ನಿರ್ಧರಿಸಲಾಗಿದೆ.
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

