ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಈಗ ನೇಪಾಳದ ಪ್ರಧಾನಿ! ರಾಪರ್ ಬಾಲೇನ್ ಸೃಷ್ಟಿಸಿದ ಅಭೂತಪೂರ್ವ ಇತಿಹಾಸ

ಕಾಠ್ಮಂಡು: ನೇಪಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಶಖೆ ಆರಂಭವಾಗಿದೆ. ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ‘ಜೆನ್ ಝಿ’ (Gen Z) ಯುವಶಕ್ತಿಯ ಹೋರಾಟದಿಂದ ಹಳೆಯ ಸರ್ಕಾರ ಪತನಗೊಂಡ ಬೆನ್ನಲ್ಲೇ, ಮಾಜಿ ರಾಪರ್ ಹಾಗೂ ಸ್ಟ್ರಕ್ಚರಲ್ ಎಂಜಿನಿಯರ್ ಬಾಲೇಂದ್ರ ಶಾ (ಬಾಲೇನ್) ನೇಪಾಳದ 47ನೇ ಪ್ರಧಾನಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಾಲೇನ್ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (RSP) ಒಟ್ಟು 275 ಸ್ಥಾನಗಳಲ್ಲಿ 182 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಚಂಡ ಬಹುಮತ ಸಾಧಿಸಿದೆ.ಕೇವಲ 35ನೇ ವಯಸ್ಸಿಗೆ ದೇಶದ ಚುಕ್ಕಾಣಿ ಹಿಡಿಯುವ ಮೂಲಕ ನೇಪಾಳದ ಇತಿಹಾಸದಲ್ಲೇ ಅತ್ಯಂತ ಕಿರಿಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಬಾಲೇನ್ ಪಾತ್ರರಾಗಿದ್ದಾರೆ.

Advertisement

ಬಾಲೇಂದ್ರ ಶಾ ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NMIT) ಯಲ್ಲಿ ಸ್ಟ್ರಕ್ಚರಲ್ ಎಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ಪದವಿ ಪಡೆದಿದ್ದಾರೆ. ಇವರ ಸಾಧನೆಗೆ ಬೆಂಗಳೂರಿನ ಅವರ ಹಳೆಯ ಪ್ರೊಫೆಸರ್‌ಗಳು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಚುನಾವಣೆಯಲ್ಲಿ ಬಾಲೇನ್ ಅವರು ನಾಲ್ಕು ಬಾರಿ ಪ್ರಧಾನಿಯಾಗಿದ್ದ ಅನುಭವಿ ನಾಯಕ ಕೆ.ಪಿ. ಶರ್ಮಾ ಓಲಿ ಅವರನ್ನು ಅವರದ್ದೇ ಭದ್ರಕೋಟೆಯಾದ ಜಾಪಾ-5 ಕ್ಷೇತ್ರದಲ್ಲಿ ಪರಾಜಯಗೊಳಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ!

2025ರಲ್ಲಿ ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧ ಮತ್ತು ಭ್ರಷ್ಟಾಚಾರದ ವಿರುದ್ಧ ಆರಂಭವಾದ ಯುವಜನರ ಹೋರಾಟವು ಅಂತಿಮವಾಗಿ ಸುಶೀಲಾ ಕಾರ್ಕಿ ಅವರ ನೇತೃತ್ವದ ಮಧ್ಯಂತರ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿತ್ತು. ಈಗ ಚುನಾವಣೆಯ ಮೂಲಕ ಜನ ಸಾಮಾನ್ಯರ ಪ್ರತಿನಿಧಿಯಾಗಿ ಬಾಲೇನ್ ಅಧಿಕಾರಕ್ಕೇರಿದ್ದಾರೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು