ಬಂಟ್ವಾಳ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿ ಕೇರಳದಲ್ಲಿ ಅರೆಸ್ಟ್

Bantwal Theft case

ಬಂಟ್ವಾಳ: ಕಳ್ಳತನ ಪ್ರಕರಣದಲ್ಲಿ ಕಳೆದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತನನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶಕೀಲ್ ಪಿ (43) ಎಂದು ಗುರುತಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ, ಕಳೆದ ಸುಮಾರು ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

Advertisement

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್‌ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಯ ತಪ್ಪೊಪ್ಪಿಗೆ ಅಂಗೀಕರಿಸಿದ ಕೋರ್ಟ್‌

ಪೊಲೀಸರು ಸುಳಿವು ಪಡೆದು ತನಿಖೆ ನಡೆಸಿ, ಕೇರಳದ ತಿರೂರು ಪ್ರದೇಶದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಮಾರ್ಚ್ 27ರಂದು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಬಂಟ್ವಾಳಕ್ಕೆ ಕರೆತರಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Advertisement

ಈ ಕಾರ್ಯಾಚರಣೆಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ಸಂತೋಷ್ ಹಾಗೂ ಶಿವಾನಂದ ಮದ್ದಿ ಯಶಸ್ವಿಯಾಗಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು