ಬೆಂಗಳೂರು: ಐಪಿಎಲ್ 2026ರ ಕ್ರಿಕೆಟ್ ಹಬ್ಬದ ನಡುವೆಯೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಅಭಿಮಾನಿಗಳಿಗೆ ಭಾರಿ ಆಘಾತ ಎದುರಾಗಿದೆ. ಸ್ನಾಯು ಸೆಳೆತದ (Muscle Strain) ಸಮಸ್ಯೆಯಿಂದಾಗಿ ತಂಡದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರು ಮುಂಬರುವ ಪ್ರಮುಖ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ಮೊದಲ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಸಿಎಸ್‌ಕೆಯನ್ನು ಎದುರಿಸಲಿದೆ. ಏಪ್ರಿಲ್ 5ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಧೋನಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.

ಸ್ನಾಯು ಸೆಳೆತದ ಸಮಸ್ಯೆಯಿಂದಾಗಿ ಧೋನಿ ಅವರಿಗೆ ಕನಿಷ್ಠ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಸೂಚಿಸಿದೆ. ಹೀಗಾಗಿ ಅವರು ಸುಮಾರು 6 ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. ಎಲ್ಲವೂ ಅಂದುಕೊಂಡಂತೆ ನಡೆದು ಅವರು ಸಂಪೂರ್ಣ ಫಿಟ್ ಆದರೆ, ಏಪ್ರಿಲ್ 23ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳಬಹುದು.
ಇದನ್ನೂ ಓದಿ: IPL: ರೋಹಿತ್ ಶರ್ಮಾ, ರಯಾನ್ ಅಬ್ಬರ; ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ ಭರ್ಜರಿ ಗೆಲುವು

ಧೋನಿ ಅವರ ಅನುಪಸ್ಥಿತಿಯಲ್ಲಿ ಚೆನ್ನೈ ತಂಡದ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ನಿರ್ವಹಿಸಲಿದ್ದಾರೆ. ಇದು ಸಂಜು ಸ್ಯಾಮ್ಸನ್ ಸಿಎಸ್‌ಕೆ ಪರ ವಿಕೆಟ್ ಕೀಪರ್-ಬ್ಯಾಟರ್ ಆಗಿ ಪಾದಾರ್ಪಣೆ ಮಾಡುತ್ತಿರುವ ವಿಶೇಷ ಸಂದರ್ಭವಾಗಲಿದೆ.
ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


