ಜಾರಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ; ಮೂಳೆಯಲ್ಲಿ ಬಿರುಕು! ವಿಡಿಯೋ ವೈರಲ್

ಇಸ್ಲಾಮಾಬಾದ್: ಪಾಕಿಸ್ತಾನದ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಅಧಿಕೃತ ಕಾರ್ಯಕ್ರಮವೊಂದರಲ್ಲಿ ಕಾಲು ಜಾರಿ ಬಿದ್ದ ಘಟನೆ ನಡೆದಿದೆ. ಈಜಿಪ್ಟ್ ವಿದೇಶಾಂಗ ಸಚಿವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಈ ಆಕಸ್ಮಿಕ ಸಂಭವಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅತಿಥಿಗಳನ್ನು ಬರಮಾಡಿಕೊಳ್ಳಲು ಮುಂದಾದಾಗ ಇಶಾಕ್ ದಾರ್ ಅವರ ಸಮತೋಲನ ತಪ್ಪಿ ಕೆಳಕ್ಕೆ ಬಿದ್ದರು. ಕೂಡಲೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ಧಾವಿಸಿ ಅವರನ್ನು ಮೇಲಕ್ಕೆತ್ತಲು ಸಹಾಯ ಮಾಡಿದರು. ಅದಾಗ್ಯೂ. ಉಪ ಪ್ರಧಾನಿಯವರ ಮೂಳೆಯಲ್ಲಿ ಬಿರುಕು ಕಂಡುಬಂದಿದೆ ಎಂದು ಅವರ ಪುತ್ರ ಅಲಿ ದರ್ ಹೇಳಿದ್ದಾರೆ.

Advertisement

ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆ ನೀಡಿ, “ಇಶಾಕ್ ದಾರ್ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ” ಎಂದು ಸ್ಪಷ್ಟಪಡಿಸಿದೆ.


ಈ ಘಟನೆಯ ನಡುವೆಯೂ ಇಶಾಕ್ ದಾರ್ ಅವರು ರಾಜತಾಂತ್ರಿಕ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ. ಈಜಿಪ್ಟ್, ಟರ್ಕಿ ಮತ್ತು ಸೌದಿ ಅರೇಬಿಯಾದ ನಾಯಕರೊಂದಿಗೆ ಅವರು ಪ್ರಮುಖ ಮಾತುಕತೆಗಳನ್ನು ನಡೆಸುತ್ತಿದ್ದಾರೆ. ವಿಶೇಷವಾಗಿ ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಲು ಸಿದ್ಧವಿದೆ ಎಂದು ಅವರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ: ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ!

ಇದೇ ಸಂದರ್ಭದಲ್ಲಿ ಇಶಾಕ್ ದಾರ್ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಹಾರ್ಮುಜ್ ಜಲಸಂಧಿಯ ಮೂಲಕ ಪಾಕಿಸ್ತಾನದ ಧ್ವಜ ಹೊಂದಿರುವ ಹೆಚ್ಚುವರಿ 20 ಹಡಗುಗಳ ಸಾಗಣೆಗೆ ಇರಾನ್ ಸರ್ಕಾರ ಒಪ್ಪಿಗೆ ನೀಡಿದೆ. ಹೊಸ ಒಪ್ಪಂದದ ಪ್ರಕಾರ, ಪ್ರತಿದಿನ ಎರಡು ಹಡಗುಗಳು ಈ ಮಾರ್ಗದಲ್ಲಿ ಸಾಗಲು ಅನುವು ಮಾಡಿಕೊಡಲಾಗಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು