ಪ್ಯಾಂಟ್ ಸಡಿಲಿಸಿ ತನ್ನ ಗುಪ್ತಾಂಗವನ್ನು ಮಹಿಳೆಯ ಕಿವಿಗೆ ತಾಗಿಸಿದ ವ್ಯಕ್ತಿ

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್‌ನ ಪ್ರತಿಷ್ಠಿತ ಸೂಪರ್ ಮಾರ್ಕೆಟ್ ಒಂದರಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಅತ್ಯಂತ ಅಸಭ್ಯ ಮತ್ತು ನೀಚ ಕೃತ್ಯವೊಂದು ವರದಿಯಾಗಿದೆ. ‘ಹೋಲ್ ಫುಡ್ಸ್’ (Whole Foods) ಮಾರುಕಟ್ಟೆಯಲ್ಲಿ ನಡೆದ ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ.

ಮಾರ್ಚ್ 23 ರಂದು ಲಾಸ್ ಏಂಜಲೀಸ್ ಕೌಂಟಿಯ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಹುಡುಕುತ್ತಿದ್ದರು. ಈ ಸಂದರ್ಭದಲ್ಲಿ ಅವರ ಹಿಂದೆಯೇ ಬಂದ ವ್ಯಕ್ತಿಯೊಬ್ಬ, ಯಾರೂ ಇಲ್ಲದ ಸಮಯ ನೋಡಿ ತನ್ನ ಪ್ಯಾಂಟ್ ಸಡಿಲಿಸಿ ಅತ್ಯಂತ ಅಸಭ್ಯವಾಗಿ ವರ್ತಿಸಿದ್ದಾನೆ. ಆತ ತನ್ನ ಗುಪ್ತಾಂಗವನ್ನು ಮಹಿಳೆಯ ಕಿವಿಗೆ ತಾಗಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

Advertisement

ಇಲ್ಲಿದೆ ನೋಡಿ:

ತಕ್ಷಣ ಎಚ್ಚೆತ್ತುಕೊಂಡ ಮಹಿಳೆ ಅಲ್ಲಿಂದ ಓಡಿ ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಅಧಿಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದನು. ಪೊಲೀಸರು ಈಗ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಪಹರಿಸಿ ಬಾಲಕಿಯ ಬರ್ಬರ ಹತ್ಯೆ, ಕಲ್ಲಿನಿಂದ ಮುಖ ಜಜ್ಜಿದ ಹಂತಕರು!

ಸಿಸಿಟಿವಿ ದೃಶ್ಯಗಳ ಪ್ರಕಾರ ಆರೋಪಿಗೆ ಸುಮಾರು 30 ವರ್ಷ ವಯಸ್ಸಿರಬಹುದು ಎಂದು ಅಂದಾಜಿಸಲಾಗಿದೆ. ಆತ ಗಡ್ಡ ಬಿಟ್ಟಿದ್ದು, ನೀಲಿ ಬಣ್ಣದ ಶರ್ಟ್ ಮತ್ತು ಹರಿದ ಜೀನ್ಸ್ ಪ್ಯಾಂಟ್ ಧರಿಸಿದ್ದನು. ಕೃತ್ಯ ಎಸಗುವ ಸಮಯದಲ್ಲಿ ಆತನ ಕೈಯಲ್ಲಿ ಮೊಬೈಲ್ ಫೋನ್ ಕೂಡ ಇತ್ತು ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಸದ್ಯ ಪೊಲೀಸರು ಈ ‘ಪರ್ವರ್ಟ್’ (ವಿಕೃತಕಾಮಿ) ಪತ್ತೆಗಾಗಿ ಸಾರ್ವಜನಿಕರ ಸಹಾಯ ಕೋರಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು