ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನಿಂದ ರಸ್ತೆಗೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರು; ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಲಿಯ ಗ್ರಾಮದ ರೇಷ್ಮೆ ರಸ್ತೆಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನಿಂದ ಇಬ್ಬರು ವಿದ್ಯಾರ್ಥಿನಿಯರು ಹೊರಬಿದ್ದ ಆಘಾತಕಾರಿ ಘಟನೆ ಮಂಗಳವಾರ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪುತ್ತೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ಸನ್ನು ಇಬ್ಬರು ಸಹೋದರಿಯರು ಗೇರುಕಟ್ಟೆಯಲ್ಲಿ ಹತ್ತಿದ್ದರು. ಬಸ್ಸು ರೇಷ್ಮೆ ರಸ್ತೆಯ ತಿರುವಿನಲ್ಲಿ ಸಾಗುತ್ತಿದ್ದಾಗ, ಅನಿರೀಕ್ಷಿತವಾಗಿ ಬಸ್ಸಿನ ಬಾಗಿಲು ತೆರೆದುಕೊಂಡಿದೆ. ಈ ವೇಳೆ ಸಮತೋಲನ ತಪ್ಪಿದ ಅಕ್ಕ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ. ತಕ್ಷಣವೇ ಅಕ್ಕನನ್ನು ಹಿಡಿಯಲು ಹೋದ ತಂಗಿ ಕೂಡ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ.

Advertisement

ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಬಿದ್ದರೂ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ಕೂಡಲೇ ಸ್ಥಳೀಯರು ಮತ್ತು ಬಸ್‌ನಲ್ಲಿದ್ದವರು ಧಾವಿಸಿ ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಮುಕ್ತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ಯಾಂಟ್ ಸಡಿಲಿಸಿ ತನ್ನ ಗುಪ್ತಾಂಗವನ್ನು ಮಹಿಳೆಯ ಕಿವಿಗೆ ತಾಗಿಸಿದ ವ್ಯಕ್ತಿ

Advertisement

ಈ ಘಟನೆಯು ಕೆಎಸ್ಆರ್‌ಟಿಸಿ ಬಸ್‌ಗಳ ಬಾಗಿಲಿನ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಅಧಿಕಾರಿಗಳು ಈ ಬಗ್ಗೆ ಗಮನಹರಿಸುವಂತೆ ಆಗ್ರಹಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು