ಬೆಂಗಳೂರು: ಹೊಸ ಹಣಕಾಸು ವರ್ಷದ ಮೊದಲ ದಿನವೇ ಸಿಲಿಕಾನ್ ಸಿಟಿ ಜನರಿಗೆ ಬೆಂಗಳೂರು ಜಲಮಂಡಳಿ (BWSSB) ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. ನೀರಿನ ದರದಲ್ಲಿ ಶೇಕಡಾ 3ರಷ್ಟು ಹೆಚ್ಚಳ ಮಾಡಲಾಗಿದ್ದು, ಏಪ್ರಿಲ್ 1 ರಿಂದಲೇ ಈ ಹೊಸ ದರ ಜಾರಿಗೆ ಬರಲಿದೆ.
ನೀರಿನ ಬಳಕೆಯ ದರದಲ್ಲಿ (Water Tariff) ಶೇ. 3ರಷ್ಟು ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆದಾರರು ಹಾಗೂ ವಾಣಿಜ್ಯ ಬಳಕೆದಾರರಿಬ್ಬರಿಗೂ ಈ ದರ ಏರಿಕೆ ಅನ್ವಯವಾಗುವ ಸಾಧ್ಯತೆಯಿದೆ. ನಿರ್ವಹಣಾ ವೆಚ್ಚದ ಹೆಚ್ಚಳ ಮತ್ತು ಮಂಡಳಿಯ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಮುಂದಿನ ತಿಂಗಳಿಂದ ಗ್ರಾಹಕರು ಪಡೆಯುವ ನೀರಿನ ಬಿಲ್‌ನಲ್ಲಿ ಈ ಹೆಚ್ಚುವರಿ ಮೊತ್ತ ಸೇರ್ಪಡೆಯಾಗಿ ಬರಲಿದೆ. ಬೆಂಗಳೂರಿನಲ್ಲಿ ಈಗಾಗಲೇ ನೀರಿನ ಅಭಾವದ ನಡುವೆ ದರ ಏರಿಕೆಯಾಗಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


