ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈನಲ್ಲಿ ಅರೆಸ್ಟ್

mangaluru-urwa-police-arrest-absconding-accused-9-years

ಮಂಗಳೂರು: ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮಂಗಳೂರಿನ ಅಶೋಕ್ ನಗರ ನಿವಾಸಿ ಸುಹಾನ್ ಅಲಿಯಾಸ್ ಸೋನು (33) ಎಂದು ಗುರುತಿಸಲಾಗಿದೆ.

ಈತನ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ 2016 ಹಾಗೂ 2017ರಲ್ಲಿ ಎರಡು ಪ್ರಕರಣಗಳು ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಒಂದು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬಂಟ್ವಾಳ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿ ಕೇರಳದಲ್ಲಿ ಅರೆಸ್ಟ್

ಉರ್ವಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಯ ವಿರುದ್ಧ LPC ವಾರಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಮಾರ್ಚ್ 29ರಂದು ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಠಾಣೆಯ ಎಎಸ್‌ಐ ಲಕ್ಷ್ಮಣ ಹಾಗೂ ಅವರ ತಂಡ ಪತ್ತೆಹಚ್ಚಿ ಬಂಧಿಸಿದರು. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು