Breaking News

Public Schools : ರಾಜ್ಯಾದ್ಯಂತ 900 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ

ಕಲಬುರಗಿ : ಗ್ರಾಮೀಣ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳ ಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ 900 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಜನವರಿ 7ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಲ್ಲಿ 600 ಶಾಲೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮೂಲಕ ನಿರ್ಮಿಸಲಾಗುವುದು. ಉಳಿದ 300 ಶಾಲೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸ್ಥಾಪಿಸಲಾಗುವುದು ಎಂದು ಹೇಳಿದರು. ಈ ಪೈಕಿ 300 ಶಾಲೆಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸ್ಥಾಪನೆಯಾಗಲಿದ್ದು, ಇದರಲ್ಲಿ 200 ಶಾಲೆಗಳಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (KKRDB) ನೆರವು ನೀಡಲಿದೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 309 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

Advertisement

ಇದನ್ನೂ ಓದಿ : Sullia : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ಖಂಡನೆ

KPS ಶಾಲೆಗಳಲ್ಲಿ ಎಲ್‌ಕೆಜಿ ಯಿಂದ‌ ದ್ವಿತೀಯ ಪಿಯುಸಿ ವರೆಗೆ ಶಿಕ್ಷಣ ನೀಡಲಾಗುತ್ತಿದ್ದು, ಕಂಪ್ಯೂಟರ್ ಸೌಲಭ್ಯ, ದ್ವಿಭಾಷಾ ಕಲಿಕೆ, ಸಂಗೀತ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ವ್ಯವಸ್ಥೆ ಇರುತ್ತದೆ. ವಿದ್ಯಾರ್ಥಿಗಳ ಕಲಿಕಾ ಫಲಿತಾಂಶ ಹೆಚ್ಚಿಸುವ ಉದ್ದೇಶದಿಂದ ಶಿಕ್ಷಕರಿಗೆ ಅಗತ್ಯಾಧಾರಿತ ತರಬೇತಿ ನೀಡಲಾಗುವುದು ಎಂದರು.

ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ವರ್ಷಕ್ಕೆ ಮೂರು ಬಾರಿ ಬರೆಯಲು ಅವಕಾಶ ನೀಡಿರುವುದರಿಂದ ಫಲಿತಾಂಶದಲ್ಲಿ ಸುಧಾರಣೆ ಕಂಡುಬಂದಿದೆ. ಕಳೆದ 2025ರ ಶೈಕ್ಷಣಿಕ ವರ್ಷದಲ್ಲಿ 1.16 ಲಕ್ಷ ಎಸ್‌ಎಸ್‌ಎಲ್‌ಸಿ ಹಾಗೂ 56,000 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. ರಾಜ್ಯದಲ್ಲಿ 11,000 ಶಿಕ್ಷಕರ ನೇಮಕಾತಿ ನಡೆಯಲಿದ್ದು, ಇದರಲ್ಲಿ 5,800 ಶಿಕ್ಷಕರು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನಿಯೋಜನೆಯಾಗಲಿದ್ದಾರೆ. ಮೇ, ಜೂನ್ ವೇಳೆಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸುಮಾರು 51,000 ಶಿಕ್ಷಕರ ಕೊರತೆಯನ್ನು ತಾತ್ಕಾಲಿಕವಾಗಿ ನಿವಾರಿಸಲು ಅತಿಥಿ ಶಿಕ್ಷಕರನ್ನು ನೇಮಿಸಲಾಗಿದ್ದು, ಶಿಕ್ಷಣಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುಟ್ಟೇದಾರ್, ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ರಾಹುಲ್ ಪಾಂಡ್ವೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು