ಕೊಣಾಜೆ: ಲಾರಿ-ಬೈಕ್ ನಡುವೆ ಭೀಕರ ಅಪಘಾತ; ನಡುಪದವಿನ ಯುವಕನಿಗೆ ಗಂಭೀರ ಗಾಯ, ಡಿಕ್ಕಿ ಹೊಡೆದು ಪರಾರಿಯಾಗಿದ್ದ ಲಾರಿ ಪತ್ತೆ!

ಕೊಣಾಜೆ, : ಮಂಗಳೂರು ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ ಸುಶಾಂತ್ (23) ಎಂದು ಗುರುತಿಸಲಾಗಿದೆ.

ಸುಶಾಂತ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಕಂಬಳಪದವು ಬಳಿ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸುಶಾಂತ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದೆ. ಕೂಡಲೇ ಸ್ಥಳೀಯರು ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಕೊಡಗಿನ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಯುವತಿ ನಾಪತ್ತೆ

ಬೈಕ್‌ಗೆ ಡಿಕ್ಕಿ ಹೊಡೆದ ನಂತರ ಲಾರಿ ಚಾಲಕ ಮಾನವೀಯತೆಯನ್ನೂ ಮರೆತು ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಮತ್ತು ಸಾರ್ವಜನಿಕರು ಲಾರಿ ಚಾಲಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಕೊಣಾಜೆ ಪೊಲೀಸರು ತನಿಖೆ ನಡೆಸಿ, ಪರಾರಿಯಾಗಿದ್ದ ಲಾರಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು