ಚೆನ್ನೈ,: ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡುತ್ತಿರುವ ಸಂಜು ಸ್ಯಾಮ್ಸನ್ ಅವರ ಬ್ಯಾಟಿಂಗ್ ವೈಫಲ್ಯ ಮುಂದುವರೆದಿದೆ. ಶುಕ್ರವಾರ ಚೆನ್ನೈನಲ್ಲಿ ನಡೆದ ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಪಂದ್ಯದಲ್ಲಿ ಕೇವಲ 7 ರನ್ ಗಳಿಸಿ ಔಟ್ ಆಗುವ ಮೂಲಕ ಸಂಜು ಸತತ ಎರಡನೇ ಬಾರಿಗೆ ಅಗ್ಗದ ಬೆಲೆಗೆ ವಿಕೆಟ್ ಒಪ್ಪಿಸಿದ್ದಾರೆ.
ಸಂಜು ಸ್ಯಾಮ್ಸನ್ 7 ಎಸೆತಗಳಲ್ಲಿ ಕೇವಲ 7 ರನ್ ಗಳಿಸಿದರು. ಕ್ಸೇವಿಯರ್ ಬಾರ್ಟ್ಲೆಟ್ ಎಸೆದ ಓವರ್‌ನಲ್ಲಿ ವಿಕೆಟ್ ಕೀಪರ್ ಪ್ರಭ್‌ಸಿಮ್ರಾನ್ ಸಿಂಗ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.ಈ ಹಿಂದಿನ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲೂ ಸಂಜು ಕೇವಲ 6 ರನ್ ಗಳಿಸಿದ್ದರು. ಹೊಸ ಫ್ರಾಂಚೈಸಿ ಪರ ದೊಡ್ಡ ಮೊತ್ತ ಗಳಿಸುವಲ್ಲಿ ಅವರು ಪದೇ ಪದೇ ವಿಫಲರಾಗುತ್ತಿದ್ದಾರೆ.

ಇದನ್ನೂ ಓದಿ: Finn Allen: SRH ವಿರುದ್ಧ ಮೊದಲ ಓವರ್ ನಲ್ಲೇ ಆರ್ಭಟಿಸಿದ ಫಿನ್ ಅಲೆನ್ ಹೊಸ ದಾಖಲೆ
ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಸಿಎಸ್‌ಕೆ ತಂಡದಲ್ಲಿ ಮ್ಯಾಟ್ ಶಾರ್ಟ್ ಬದಲಿಗೆ ಪ್ರಶಾಂತ್ ವೀರ್ ಅವರಿಗೆ ಅವಕಾಶ ನೀಡಲಾಗಿತ್ತು.

ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


