ನವದೆಹಲಿ: ಎಲ್ಪಿಜಿ ಸಿಲಿಂಡರ್ ಲಭ್ಯತೆ ಕುರಿತಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳ ಬಗ್ಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಮಾಹಿತಿ ಸಂವಹನ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವಂತೆ ಸೂಚಿಸಿದೆ.
ಪ್ರಸ್ತುತ ಕೇವಲ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮಾತ್ರ ನಿಯಮಿತ ಸುದ್ದಿಗೋಷ್ಠಿಗಳನ್ನು ನಡೆಸುತ್ತಿರುವುದಾಗಿ ಸಚಿವಾಲಯ ತಿಳಿಸಿದ್ದು, ಇದು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸಾಲದು ಎಂದು ಅಭಿಪ್ರಾಯಪಟ್ಟಿದೆ. ಉಳಿದ ರಾಜ್ಯಗಳು ಕೂಡ ತಕ್ಷಣವೇ ಇದೇ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ

ಇದನ್ನೂ ಓದಿ : ಐಪಿಎಲ್ 2026: ಸಂಜು ಸ್ಯಾಮ್ಸನ್ಗೆ ಸತತ ಎರಡನೇ ಸೋಲು; ಸಿಎಸ್ಕೆ vs ಪಿಬಿ ಕೆಎಸ್ ಪಂದ್ಯದಲ್ಲೂ ನಿರಾಸೆ!
ಪೆಟ್ರೋಲಿಯಂ ಕಾರ್ಯದರ್ಶಿ ನೀರಜ್ ಮಿತ್ತಲ್ ಅವರು ಬರೆದಿರುವ ಪತ್ರದಲ್ಲಿ, ಕೆಲವು ಪ್ರದೇಶಗಳಲ್ಲಿ ಇನ್ನೂ ತಪ್ಪು ಮಾಹಿತಿಗಳು ಹರಡುತ್ತಿದ್ದು, ಇದರಿಂದ ಜನರಲ್ಲಿ ಅನಗತ್ಯ ಆತಂಕ ಉಂಟಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಭೀತಿಯ ಪರಿಣಾಮವಾಗಿ ಹಲವೆಡೆಗಳಲ್ಲಿ ಅತಿಯಾದ ಖರೀದಿ ನಡೆಯುತ್ತಿರುವುದೂ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ, ಸಾಮಾಜಿಕ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಸಮಯೋಚಿತ ಮತ್ತು ನಿಖರ ಮಾಹಿತಿ ನೀಡುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಲಾಗಿದೆ. ದೇಶದಲ್ಲಿ ಎಲ್ಪಿಜಿ ಸಮರ್ಪಕ ಪ್ರಮಾಣದಲ್ಲಿ ಲಭ್ಯವಿದ್ದು, ವಿತರಣಾ ವ್ಯವಸ್ಥೆಯೂ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವಿಶ್ವಾಸವನ್ನು ಜನರಲ್ಲಿ ಮೂಡಿಸುವುದು ಅತ್ಯಗತ್ಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ.ಇದಲ್ಲದೆ, ಬ್ಲ್ಯಾಕ್ ಮಾರ್ಕೆಟಿಂಗ್ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ.
ದೇಶದ ಮತ್ತಷ್ಟು ಸುದ್ದಿಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ


