IPL: ರಿಜ್ವಿ ಅಬ್ಬರಕ್ಕೆ ಮಣಿದ ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಗೆಲುವು

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್‌ಗಳನ್ನು ಕಲೆಹಾಕಿತು. ತಂಡದ ಪರ ಸೂರ್ಯಕುಮಾರ್ ಯಾದವ್ 51 ರನ್‌ಗಳೊಂದಿಗೆ ಪ್ರಮುಖ ಕೊಡುಗೆ ನೀಡಿದರೆ, ರೋಹಿತ್ ಶರ್ಮಾ 35 ಹಾಗೂ ನಮನ್ ಧೀರ್ 28 ರನ್ ಗಳಿಸಿದರು. ಮಿಚೆಲ್ ಸ್ಯಾಂಟ್ನರ್ 18, ಕಾರ್ಬಿನ್ ಬಾಷ್ 11 ರನ್ ಸೇರಿಸಿದರು. ಆದರೆ ತಿಲಕ್ ವರ್ಮಾ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು.

Advertisement

ಡೆಲ್ಲಿ ಪರ ಬೌಲಿಂಗ್‌ನಲ್ಲಿ ಮುಖೇಶ್ ಕುಮಾರ್ 2 ವಿಕೆಟ್ ಪಡೆದು ಗಮನ ಸೆಳೆದರೆ, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ವಿಪ್ರಜ್ ನಿಗಮ್ ಹಾಗೂ ಬಿಟಿ ನಟರಾಜನ್ ತಲಾ 1 ವಿಕೆಟ್ ಪಡೆದರು.

ಇದನ್ನೂ ಓದಿ: ಬೆಂಗಳೂರಲ್ಲಿ ನಾಳೆ ಆರ್‌ಸಿಬಿ-ಸಿಎಸ್‌ಕೆ ಫೈಟ್: ಅಭಿಮಾನಿಗಳಿಗೆ ಪೊಲೀಸ್ ಕಮಿಷನರ್ ಕಟ್ಟುನಿಟ್ಟಿನ ಎಚ್ಚರಿಕೆ

Advertisement

163 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 164 ರನ್‌ಗಳನ್ನು ಬಾರಿಸಿ ಗೆಲುವಿನ ನಗೆ ಬೀರಿತು.

ಡೆಲ್ಲಿ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಸಮೀರ್ ರಿಜ್ವಿ 51 ಎಸೆತಗಳಲ್ಲಿ 7 ಬೌಂಡರಿ ಹಾಗೂ 7 ಸಿಕ್ಸರ್‌ಗಳೊಂದಿಗೆ ಅಜಾಗರೂಕ ಮುಂಬೈ ಬೌಲಿಂಗ್ ಮೇಲೆ ದಾಳಿ ನಡೆಸಿ 90 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಪಾತುಮ್ ನಿಸ್ಸಂಕ 44 ರನ್ ಗಳಿಸಿ ಉತ್ತಮ ಬೆಂಬಲ ನೀಡಿದರು. ಅಂತಿಮ ಹಂತದಲ್ಲಿ ಡೇವಿಡ್ ಮಿಲ್ಲರ್ 21 ಹಾಗೂ ಟ್ರಿಸ್ಟಾನ್ ಸ್ಟಬ್ಸ್ 3 ರನ್‌ಗಳೊಂದಿಗೆ ಅಜೇಯರಾಗಿ ತಂಡವನ್ನು ಗೆಲುವಿನ ಗುರಿಗೆ ತಲುಪಿಸಿದರು.

Advertisement

ಮುಂಬೈ ಪರ ದೀಪಕ್ ಚಹಾರ್, ಮಿಚೆಲ್ ಸ್ಯಾಂಟ್ನರ್ ಮತ್ತು ಕಾರ್ಬಿನ್ ಬಾಷ್ ತಲಾ 1 ವಿಕೆಟ್ ಪಡೆದರೂ, ರಿಜ್ವಿ ಅಬ್ಬರವನ್ನು ತಡೆಯಲು ಸಾಧ್ಯವಾಗಲಿಲ್ಲ.

ಈ ಗೆಲುವಿನ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಮಹತ್ವದ ಜಯ ದಾಖಲಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.

ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು