ಗುವಾಹಟಿ : ಅಸ್ಸಾಂ ವಿಧಾನಸಭೆ ಚುನಾವಣೆಯ ಹೊತ್ತಲ್ಲೇ ರಾಜಕೀಯ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭೂನ್ಯಾ ಶರ್ಮಾ ಅವರು ಮೂರು ವಿದೇಶಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಸಿಎಂ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ನಾಯಕರಾದ ಪವನ್ ಖೇರಾ ಮತ್ತು ಗೌರವ್ ಗೊಗೊಯ್ ಅವರು ಪತ್ರಿಕಾಗೋಷ್ಠಿ ನಡೆಸಿ, ಸಿಎಂ ಪತ್ನಿ ಯುಎಇ, ಆಂಟಿಗುವಾ-ಬಾರ್ಬುಡಾ ಮತ್ತು ಈಜಿಪ್ಟ್‌ನ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ನಕಲಿ ದಾಖಲೆಗಳನ್ನು ಪ್ರದರ್ಶಿಸಿದ್ದರು. ಈ ಮೂಲಕ ಸಿಎಂ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ದೂರಿದ್ದರು.

ಕಾಂಗ್ರೆಸ್ ಮಾಡಿರುವ ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಹಿಮಂತ ಬಿಸ್ವಾ ಶರ್ಮಾ, ಕಾಂಗ್ರೆಸ್‌ಗೆ ಪಾಕಿಸ್ತಾನದ ಬೆಂಬಲವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. “ಕಾಂಗ್ರೆಸ್ ನಾಯಕರು ನೀಡಿರುವ ಈ ಸುಳ್ಳು ಮಾಹಿತಿಯನ್ನು ಪಾಕಿಸ್ತಾನದ ಸಾಮಾಜಿಕ ಮಾಧ್ಯಮ ಗುಂಪುಗಳು ಒದಗಿಸಿವೆ. ಕಳೆದ 10 ದಿನಗಳಲ್ಲಿ ಪಾಕಿಸ್ತಾನಿ ಚಾನೆಲ್‌ಗಳು ಅಸ್ಸಾಂ ಚುನಾವಣೆ ಬಗ್ಗೆ 11 ಟಾಕ್ ಶೋಗಳನ್ನು ನಡೆಸಿ ಕಾಂಗ್ರೆಸ್ ಪರವಾಗಿ ಬ್ಯಾಟಿಂಗ್ ಮಾಡಿವೆ. ಇದು ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ತೋರಿಸುತ್ತದೆ” ಎಂದು ಅವರು ಗುಡುಗಿದ್ದಾರೆ.
ಇದನ್ನೂ ಓದಿ: ನಾನು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3,000 ರೂ., ಪುರುಷರಿಗೆ 2,000 ರೂ. ನೀಡುತ್ತೇನೆ: ಯತ್ನಾಳ್

ಅಸ್ಸಾಂನಲ್ಲಿ ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಅದಕ್ಕೂ ಮುನ್ನವೇ ಈ ಪಾಸ್‌ಪೋರ್ಟ್ ವಿವಾದವು ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾನೂನು ಜಾರಿ ಸಂಸ್ಥೆಗಳು ಈ ನಕಲಿ ದಾಖಲೆಗಳ ಹರಡುವಿಕೆಯ ಬಗ್ಗೆ ತನಿಖೆ ನಡೆಸಲಿವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


