🚲 ಕೊಯಿಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, ವಿದ್ಯಾರ್ಥಿಗಳಲ್ಲಿ ಮನೆಮಾಡಿದ ಸಂತಸ

bantwal koyila school bicycle distribution for students

ಬಂಟ್ವಾಳ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆನರಾ ರೆಬೆಕೊ ಸಂಸ್ಥೆಯ ವತಿಯಿಂದ ಸೈಕಲ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಒಟ್ಟು 50 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ಗಳನ್ನು ನೀಡಲಾಗಿದ್ದು, ವಿದ್ಯಾರ್ಥಿಗಳಲ್ಲಿ ಸಂತಸ ಮನೆಮಾಡಿತು.

ಸಂಸ್ಥೆಯ ಉಪಾಧ್ಯಕ್ಷ ಮುರಳೀಧರ ಶೆಣೈ ಹಾಗೂ ಸಂಸ್ಥೆಯ ಉದ್ಯೋಗಿ ಮತ್ತು ಇದೇ ಶಾಲೆಯ ಹಳೆಯ ವಿದ್ಯಾರ್ಥಿ ರಾಜೇಶ್ ಅಂಚನ್ ಕಾರ್ಯಕ್ರಮವನ್ನು ನೆರವೇರಿಸಿದರು.

Advertisement

ಗ್ರಾಮೀಣ ಪ್ರದೇಶಗಳಲ್ಲಿ ಮನೆಯಿಂದ ಶಾಲೆಗೆ ಹೋಗಿ ಬರಲು ಅನುಕೂಲವಾಗಲೆಂದು ಸೈಕಲ್‌ ವಿತರಣೆ ಮಾಡಾಗುತ್ತಿದ್ದು, ವಿದ್ಯಾರ್ಥಿಗಳ ಪಾಲಿಗೆ ಬಹಳ ಉಪಯುಕ್ತವಾಗಿವೆ. ಇದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗಲು ಮತ್ತು ಶಿಕ್ಷಣದಲ್ಲಿ ಹೆಚ್ಚು ಗಮನ ಹರಿಸಲು ಸಹಾಯವಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಕೊನೆಯ ಕ್ಷಣದಲ್ಲಿ ಕೆಎಸ್‌ಇಎಬಿ ಅಧ್ಯಕ್ಷರಿಂದ ಬಿಗ್ ಅಪ್‌ಡೇಟ್!

Advertisement

ಕೆನರಾ ರೆಬೆಕೊ ಸಂಸ್ಥೆ ಕಳೆದ ಆರು ವರ್ಷಗಳಿಂದ ನಿರಂತರವಾಗಿ ಈ ಸೇವಾ ಕಾರ್ಯವನ್ನು ನಡೆಸುತ್ತಿದ್ದು, ಸಮಾಜಮುಖಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಕೈಜೋಡಿಸುತ್ತಿದೆ. ಸಂಸ್ಥೆಯ ಈ ಕಾರ್ಯವನ್ನು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯ ಲ್ಯಾನ್ಸಿ ಕುವೆಲ್ಲೊ, ನಿವೃತ್ತ ಶಿಕ್ಷಕ ರಮೇಶ್ ಮಯ್ಯ ಹಾಗೂ ಮುಖ್ಯ ಶಿಕ್ಷಕಿ ಸೌಜನ್ಯ ಉಪಸ್ಥಿತರಿದ್ದರು.

Advertisement

ಹಿರಿಯ ಶಿಕ್ಷಕಿ ಸೌಮ್ಯ ಸ್ವಾಗತಿಸಿದರು. ಶಿಕ್ಷಕ ಪ್ರವೀಣ್ ಕಾಮತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ಮೂಡಿಸಿದ್ದು, ಶಿಕ್ಷಣದತ್ತ ಮತ್ತಷ್ಟು ಪ್ರೇರಣೆ ನೀಡುವಂತಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು