ಬೆಳ್ತಂಗಡಿ: ನಿಯಂತ್ರಣ ತಪ್ಪಿ ಪಾದಚಾರಿಗೆ ಢಿಕ್ಕಿ ಹೊಡೆದ ಕ್ರೇನ್; ತಮಿಳುನಾಡು ಮೂಲದ ವ್ಯಕ್ತಿ ಸಾವು

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಕ್ರೇನ್ ಒಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಮಿಳುನಾಡು ಮೂಲದ ಮಹಾಲಿಂಗಂ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ತಾಲೂಕಿನ ಕೊಳ್ತಿಗೆ ಎಂಬಲ್ಲಿ ವಾಸವಾಗಿದ್ದರು.

ಮಹಾಲಿಂಗಂ ಅವರು ಉಪ್ಪಿನಂಗಡಿ ಕಡೆಯಿಂದ ಪಿಲಿಗೂಡು ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಕ್ರೇನ್, ಚಾಲಕನ ನಿಯಂತ್ರಣ ತಪ್ಪಿ ಮಹಾಲಿಂಗಂ ಅವರಿಗೆ ಜೋರಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಮಹಾಲಿಂಗಂ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ತಂತ್ರಜ್ಞಾನ ಬಳಕೆಯ ನಡುವೆ ಚಿಂತನಾ ಶಕ್ತಿ ಕಾಪಾಡಿಕೊಳ್ಳಿ: ಅತುಲ್ ಭಟ್

ಘಟನೆಗೆ ಸಂಬಂಧಿಸಿದಂತೆ ಮೃತರ ಪುತ್ರ ಸುದಿನ್ ಅವರು ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕ್ರೇನ್ ಚಾಲಕನ ವಿರುದ್ಧ ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟೂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು