ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ–1ರ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ https://karresults.nic.in ಮೂಲಕ ಫಲಿತಾಂಶ ವೀಕ್ಷಿಸಬಹುದು. ಸೈಟ್ನಲ್ಲಿ ಸರ್ವರ್ ಸಮಸ್ಯೆ ಎದುರಾದಲ್ಲಿ ಡಿಜಿಲಾಕರ್ ಮೂಲಕವೂ ಫಲಿತಾಂಶ ಪರಿಶೀಲಿಸಲು ಅವಕಾಶ ನೀಡಲಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸುವ ವಿಧಾನ
ಫಲಿತಾಂಶ ವೀಕ್ಷಿಸಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ, ರಿಜಿಸ್ಟ್ರೇಷನ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ Submit ಬಟನ್ ಕ್ಲಿಕ್ ಮಾಡಿದರೆ ಅಂಕಪಟ್ಟಿ ಪರದೆಯ ಮೇಲೆ ಪ್ರದರ್ಶವಾಗುತ್ತದೆ.

ಡಿಜಿಲಾಕರ್ನಲ್ಲಿ ಫಲಿತಾಂಶ ವೀಕ್ಷಿಸಿ
ಈ ವರ್ಷ ಮೊದಲ ಬಾರಿಗೆ ವಿದ್ಯಾರ್ಥಿಗಳು ಡಿಜಿಲಾಕರ್ (DigiLocker) ಮೂಲಕವೂ ಫಲಿತಾಂಶ ವೀಕ್ಷಿಸಬಹುದು.
ಇದನ್ನೂ ಓದಿ: ನಿಯಂತ್ರಣವಿಲ್ಲದ ಟ್ರೆಕ್ಕಿಂಗ್ಗೆ ಬ್ರೇಕ್: ಶೀಘ್ರದಲ್ಲೇ ಹೊಸ ನಿಯಮಗಳು

ವಿದ್ಯಾರ್ಥಿಗಳು ತಮ್ಮ ಮೊಬೈಲ್ನಲ್ಲಿ DigiLocker ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಲಾಗಿನ್ ಆಗಿ ಫಲಿತಾಂಶ ಪರಿಶೀಲಿಸಬಹುದು. ಅಪ್ಲಿಕೇಶನ್ ಇಲ್ಲದಿದ್ದರೆ ನೇರವಾಗಿ digilocker.gov.in ವೆಬ್ಸೈಟ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


