ಬಂಟ್ವಾಳ: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶದ ಸಂಭ್ರಮ ಮನೆಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬ ನಿವಾಸಿಗಳಾದ ತಾಯಿ ಮತ್ತು ಮಗಳು ಏಕಕಾಲದಲ್ಲಿ ಉತ್ತೀರ್ಣರಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಹೇಮಶ್ರೀ ಆರ್. ಅವರು 562 ಅಂಕಗಳನ್ನು (ವಿಶಿಷ್ಟ ಶ್ರೇಣಿ) ಗಳಿಸುವ ಮೂಲಕ ತಮ್ಮ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಅವರು ಮೊಂಟೆಪದವು ಸರಕಾರಿ ಪದವಿಪೂರ್ವ ಕಾಲೇಜಿನ ಮೂಲಕ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು 257 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ತಂತ್ರಜ್ಞಾನ ಬಳಕೆಯ ನಡುವೆ ಚಿಂತನಾ ಶಕ್ತಿ ಕಾಪಾಡಿಕೊಳ್ಳಿ: ಅತುಲ್ ಭಟ್
ನಂದಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರವಿಕುಮಾರ್ ಅವರ ಪತ್ನಿಯಾದ ನೇತ್ರಾವತಿ ಅವರಿಗೆ ಪಿಯುಸಿ ಮುಗಿಸುವ ಆಸೆ ಬಹಳ ಕಾಲದಿಂದ ಇತ್ತು. ಮಗಳು ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ಪತಿಯ ಪ್ರೋತ್ಸಾಹ ಮತ್ತು ಕಾಲೇಜು ಉಪನ್ಯಾಸಕರ ಬೆಂಬಲದಿಂದ ತಾವೂ ಪರೀಕ್ಷೆ ಬರೆಯಲು ನಿರ್ಧರಿಸಿದರು. ಮೊಂಟೆಪದವು ಕೇಂದ್ರದಲ್ಲಿ ಪರೀಕ್ಷೆ ಬರೆದ ಇವರು, ಇಂದು ಮಗಳ ಜೊತೆಯೇ ಫಲಿತಾಂಶದ ಸಂಭ್ರಮ ಹಂಚಿಕೊಂಡಿದ್ದಾರೆ.

ಇನ್ನಷ್ಟೂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ


