ಹುಲಿಕಲ್ ಘಾಟ್ ಗುಡ್ಡ ಕುಸಿತ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಸಾರಿಗೆ ಮಾರ್ಗವಾದ ಹುಲಿಕಲ್ ಘಾಟ್‌ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದ ಈ ಅವಘಡದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಲಾಗಿದೆ.

ಹುಲಿಕಲ್ ಘಾಟ್‌ನಲ್ಲಿ ರಸ್ತೆ ಸುರಕ್ಷತೆಯ ಭಾಗವಾಗಿ ತಡೆಗೋಡೆ ನಿರ್ಮಿಸುವ ಕೆಲಸ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಮೇಲ್ಭಾಗದಿಂದ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು.

Advertisement

ಇಲ್ಲಿದೆ ನೋಡಿ ಫೋಸ್ಟ್:

ಚಕ್ಕಾರು ಗ್ರಾಮದ ರಾಘು (37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30) ಮತ್ತು ಶಬ್ಬೀರ್ (40) ಮೃತಪಟ್ಟ ದುರ್ದೈವಿಗಳು.ಗುರುವಾರ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದರೆ, ಶುಕ್ರವಾರ ಬೆಳಿಗ್ಗೆ ಮತ್ತೊಬ್ಬ ಕಾರ್ಮಿಕನ ಶವ ಸಿಕ್ಕಿದೆ. ಎಸ್‌ಡಿಆರ್‌ಎಫ್ (SDRF), ಅಗ್ನಿಶಾಮಕ ದಳ ಮತ್ತು ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮೂರು ದಿನಗಳ ಶೋಧ ಬಳಿಕ 16 ವರ್ಷದ ಬಾಲಕಿ ಶವ ಪತ್ತೆ

ಈ ಕುರಿತು ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿಯವರು, “ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಕಳೆದುಹೋಗಿರುವುದು ದುಃಖಕರ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ,” ಎಂದು ಪ್ರಾರ್ಥಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಮಾಹಿತಿ ಪಡೆದಿರುವುದಾಗಿ ತಿಳಿಸಿದ್ದಾರೆ.

ಚಿಕ್ಕಮಗಳೂರಿನ ಇನ್ನಷ್ಟೂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು