ಹಸೆಮಣೆ ಏರಬೇಕಿದ್ದ ಯುವ ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ: ಧಾರವಾಡದಲ್ಲಿ ನಡುರಾತ್ರಿ ನಡೆದಿದ್ದೇನು?

ಧಾರವಾಡ: ನಗರದ ಮಲಾಪುರ (ಹಾಶ್ಮಿನಗರ) ನಿವಾಸಿಯಾಗಿರುವ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ (32) ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಶೀಘ್ರವೇ ಮದುವೆಯಾಗಬೇಕಿದ್ದ ಯುವ ನಾಯಕ ರಾಜಕೀಯ ದ್ವೇಷ ಅಥವಾ ವೈಯಕ್ತಿಕ ವೈಷಮ್ಯಕ್ಕೆ ಬಲಿಯಾಗಿರುವುದು ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

ಶುಕ್ರವಾರ ರಾತ್ರಿ (ಏಪ್ರಿಲ್ 10) ಸುಮಾರು 9:30 ರಿಂದ 10 ಗಂಟೆಯ ನಡುವೆ ಫೈರೋಜ್ ಅವರು ತಮ್ಮ ಮನೆಯ ಹೊರಗೆ ಕುಳಿತಿದ್ದಾಗ, ಮಾರಕಾಸ್ತ್ರಗಳೊಂದಿಗೆ ಬಂದ ನಾಲ್ಕರಿಂದ ಐದು ಜನ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಫೈರೋಜ್ ಮನೆಯೊಳಗೆ ಓಡಿ ಹೋಗಿ ಬಾಗಿಲು ಹಾಕಿಕೊಂಡರೂ, ಹಂತಕರು ಬಾಗಿಲು ಮುರಿದು ಒಳನುಗ್ಗಿ ಅವರ ಮೇಲೆ ಮನಬಂದಂತೆ ದಾಳಿ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಫೈರೋಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Advertisement

ಫೈರೋಜ್ ಪಠಾಣ್ ಅವರ ಮದುವೆ ಇದೇ ತಿಂಗಳು ಏಪ್ರಿಲ್ 24ರಂದು ನಿಶ್ಚಯವಾಗಿತ್ತು. ಇಡೀ ಮನೆಯಲ್ಲಿ ಮದುವೆಯ ಸಂಭ್ರಮ ಮನೆಮಾಡಿತ್ತು. ಇನ್ನೇನು ಎರಡು ವಾರಗಳಲ್ಲಿ ಹಸೆಮಣೆ ಏರಬೇಕಿದ್ದ ಮಗ ಈಗ ಹೆಣವಾಗಿ ಬಿದ್ದಿರುವುದನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಹಂತಕರು ಫೈರೋಜ್ ತಾಯಿ ಮತ್ತು ಸೋದರಿಯ ಮೇಲೂ ಹಲ್ಲೆ ನಡೆಸಿ, ಮನೆಯಲ್ಲಿದ್ದ ಎರಡು ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಮಂಗಳೂರು ASI ಕೊಲೆಯತ್ನ ಪ್ರಕರಣ: ವಿದೇಶದಲ್ಲಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್!

Advertisement

ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. “ರಾಜಕೀಯ ದ್ವೇಷವೇ ಅಥವಾ ಹಳೆಯ ವೈಷಮ್ಯವೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು,” ಎಂದು ಅವರು ತಿಳಿಸಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯರಲ್ಲೇ ಅಡಗಿದ್ದ ಹಂತಕರು ಈ ಕೃತ್ಯವೆಸಗಿದ್ದಾರೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು