ವಿಜ್ಞಾನದಲ್ಲಿ ರಾಜ್ಯಕ್ಕೆ 3ನೇ ರ‍್ಯಾಂಕ್: ಶಾರ್ವರೀ ಆರ್. ಎಸ್. ಸೇರಿದಂತೆ ಐವರು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಪ್ರವರ್ತಿತ ನೆಲ್ಲಿಕಟ್ಟೆ ಮತ್ತು ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ. 75ರಷ್ಟು ಮಂದಿ ವಿಶಿಷ್ಟ ಶ್ರೇಣಿಯಲ್ಲಿ (Distinction) ತೇರ್ಗಡೆಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿವೆ.

ಸಂಸ್ಥೆಯ ಒಟ್ಟು 484 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 363 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಶೈಕ್ಷಣಿಕ ಸಾಧನೆಯ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

600ರಲ್ಲಿ 597 ಅಂಕ ಗಳಿಸಿ ರಾಜ್ಯಕ್ಕೆ 3ನೇ ರ‍್ಯಾಂಕ್ ಪಡೆದ ಶಾರ್ವರೀ ಆರ್. ಎಸ್., 594 ಅಂಕಗಳೊಂದಿಗೆ 6ನೇ ಸ್ಥಾನ ಪಡೆದ ತ್ರಿಶೂಲ್ ಎನ್.ಡಿ. ಮತ್ತು ಗಗನ್ ಕೆ.ಆರ್. ಅವರನ್ನು ಗೌರವಿಸಲಾಯಿತು. 594 ಅಂಕ ಗಳಿಸಿ ರಾಜ್ಯಕ್ಕೆ 7ನೇ ಸ್ಥಾನ ಪಡೆದ ಪ್ರತೀಕ್ಷಾ ಶೆಣೈ ಹಾಗೂ 593 ಅಂಕ ಗಳಿಸಿದ ಅನನ್ಯಾ ವಿ. ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: ಪೋಷಕರಿಗೆ ಭರ್ಜರಿ ಸಿಹಿ ಸುದ್ದಿ: 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 2 ತಿಂಗಳ ಸಡಿಲಿಕೆ ನೀಡಿದ ಸರ್ಕಾರ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಅವರು ಸಾಧಕರಿಗೆ ಹಾರೈಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ಉಪಪ್ರಾಂಶುಪಾಲೆ ಶೈನಿ ಹಾಗೂ ಬೋಧಕ ವರ್ಗದವರು ಉಪಸ್ಥಿತರಿದ್ದರು.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು