ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ: ಭಾರತೀಯ ಚಿತ್ರರಂಗದ ದಂತಕಥೆ, ಹಿರಿಯ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಹೃದಯಾಘಾತವಾಗಿದ್ದು, ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ಏಪ್ರಿಲ್ 11, ಶನಿವಾರ) ಸಂಜೆ ಅವರಿಗೆ ತೀವ್ರ ಹೃದಯಾಘಾತ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪ್ರಸ್ತುತ ಆಶಾ ಭೋಸ್ಲೆ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಲಾಗಿದ್ದು, ಪರಿಣಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ, ಅವರ ಆರೋಗ್ಯ ಸ್ಥಿತಿ ಸದ್ಯಕ್ಕೆ ಗಂಭೀರವಾಗಿದ್ದು, ಮುಂದಿನ 24 ಗಂಟೆಗಳು ಬಹಳ ನಿರ್ಣಾಯಕವಾಗಿವೆ ಎನ್ನಲಾಗಿದೆ.

Advertisement

ಸುದ್ದಿ ತಿಳಿಯುತ್ತಿದ್ದಂತೆಯೇ ಆಶಾ ಭೋಸ್ಲೆ ಅವರ ಕುಟುಂಬ ಸದಸ್ಯರು ಮತ್ತು ಚಿತ್ರರಂಗದ ಪ್ರಮುಖರು ಆಸ್ಪತ್ರೆಗೆ ಧಾವಿಸುತ್ತಿದ್ದಾರೆ. ಏಳು ದಶಕಗಳಿಗೂ ಹೆಚ್ಚು ಕಾಲ ಸಾವಿರಾರು ಹಾಡುಗಳಿಗೆ ಧ್ವನಿಯಾಗಿರುವ ಆಶಾ ಭೋಸ್ಲೆ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇಶಾದ್ಯಂತ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಮೊನಾಲಿಸಾ ಮದುವೆ ವಿವಾದಕ್ಕೆ ಬಿಗ್ ಟ್ವಿಸ್ಟ್: ಗಂಡ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್ ದಾಖಲು!

Advertisement

ವೈದ್ಯರಾದ ಪ್ರತೀತ್ ಸಮ್ದಾನಿ ಅವರ ನೇತೃತ್ವದ ತಂಡ ಗಾಯಕಿಯ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದೆ. ಕುಟುಂಬದ ವತಿಯಿಂದ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು