ಸಿಇಟಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ 1 ಮತ್ತು 2ನೇ ಪರೀಕ್ಷೆಯ ‘ಬೆಸ್ಟ್’ ಅಂಕವೇ ರ‍್ಯಾಂಕಿಂಗ್‌ಗೆ ಮಾನದಂಡ!

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲಿ ಸಿಇಟಿ (CET) ಅಂಕಗಳ ಪರಿಗಣನೆ ಕುರಿತು ಇದ್ದ ಗೊಂದಲಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತೆರೆ ಎಳೆದಿದೆ. ವಿದ್ಯಾರ್ಥಿಗಳು ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ (Highest marks), ಆ ಅಂಕಗಳನ್ನೇ ಸಿಇಟಿ ರ‍್ಯಾಂಕಿಂಗ್‌ಗೆ ಪರಿಗಣಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

“ಅಭ್ಯರ್ಥಿಗಳು ತಮ್ಮ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ ವರ್ಷದಂತೆಯೇ ಈ ಬಾರಿಯೂ ಎರಡೂ ಪರೀಕ್ಷೆಗಳಲ್ಲಿ ಪಡೆದ ಗರಿಷ್ಠ ಅಂಕಗಳನ್ನೇ ಸಿಇಟಿ ರ‍್ಯಾಂಕ್ ನೀಡಲು ಬಳಸಲಾಗುತ್ತದೆ. ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎಂಬ ಮಾತುಗಳು ಕೇವಲ ಸುಳ್ಳು ವದಂತಿ,” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಇದನ್ನೂ ಓದಿ: ಉಡುಪಿ: ವೃದ್ಧನ ಪ್ರಾಣ ಉಳಿಸಿದ ‘ಒಟಿಪಿ’; ಗ್ಯಾಸ್ ಡೆಲಿವರಿ ಬಾಯ್ ಸಮಯಪ್ರಜ್ಞೆಗೆ ಶಹಬ್ಬಾಸ್!

ದ್ವಿತೀಯ ಪಿಯುಸಿಯ ಎರಡೂ ಪರೀಕ್ಷೆಗಳ ಫಲಿತಾಂಶ ಪ್ರಕಟವಾದ ನಂತರವೇ ಕೆಇಎ ತನ್ನ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಿದೆ. ಇದರಿಂದಾಗಿ ಎರಡನೇ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ.

Advertisement

ಈ ನಿಯಮವು ಕೇವಲ ಕರ್ನಾಟಕ ರಾಜ್ಯ ಪಠ್ಯಕ್ರಮದ (State Syllabus) ಪಿಯುಸಿ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಸಿಬಿಎಸ್‌ಇ, ಐಸಿಎಸ್‌ಇ ಅಥವಾ ಇತರ ರಾಜ್ಯಗಳ ಬೋರ್ಡ್ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು