Breaking News

Accident : ಕಾರು-ಟ್ರಕ್ ಭೀಕರ ಅಪಘಾತದಲ್ಲಿ ಮಾಜಿ ಗೃಹ ಸಚಿವರ ಪುತ್ರಿ ಸೇರಿ ಮೂವರ ದುರ್ಮರಣ

ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲೊಂದು ಭೀಕರ ಅಪಘಾತ ಸಂಭವಿಸಿ, ಮೂರು ಜನ ಸ್ಥಳದಲ್ಲೇ ಮೃತರಾಗಿರುವುದು ವರದಿಯಾಗಿದೆ. ಮಧ್ಯಪ್ರದೇಶದ ಮಾಜಿ ಗೃಹ ಸಚಿವ ಹಾಗೂ ರಾಜ್‌ಪುರ್ ಹಾಲಿ ಶಾಸಕ ಬಾಲಾ ಬಚ್ಚನ್ ಅವರ ಪುತ್ರಿ ಪ್ರೇರಣ ಬಚ್ಚನ್ ಸೇರಿ, ಮೂರು ಜನ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತೇಜಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮತ್ತೊಬ್ಬ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಟ್ರಕ್ ಚಾಲಕ ಪೊಲೀಸರ ವಶದಲ್ಲಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ :Punjab : ಸ್ನೇಹಿತನ ಕೊಲೆಗೈದು ಮೃತದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ತುಂಬಿಸಿದ ವ್ಯಕ್ತಿ!

Advertisement

ಇಂದು (ಜ.09) ಬೆಳಗ್ಗೆ ಮಾಜಿ ಗೃಹ ಸಚಿವ ಬಾಲಾ ಬಚ್ಚನ್ ಪುತ್ರಿ ಪ್ರೇರಣ ಬಚ್ಚನ್ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಕಾರು, ಅತೀ ವೇಗವಾಗಿ ಬಂದ ಟ್ರಕ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಪ್ರೇರಣ ಬಚ್ಚನ್, ಮಾನ್ ಸಂಧು ಮತ್ತು ಪ್ರಖರ್ ಮೃತಪಟ್ಟಿದ್ದು, ಮತ್ತೊರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಟ್ರಕ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಶಾಸಕ ಬಾಲಾ ಬಚ್ಚನ್ ಅವರ ಮುದ್ದಿನ ಮಗಳು ಪೇರಣ ಬಚ್ಚನ್ ಅವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ಧಾವಿಸಿ, ಸಂಪೂರ್ಣ ನಜ್ಜುಗುಜ್ಜಾದ ಕಾರಿನಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಗಾಯಗೊಂಡಿದ್ದ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ, ಅತೀ ವೇಗದ ವಾಹನ ಚಾಲನೆ ಸೇರಿದಂತೆ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಾಸಕ ಬಾಲಾ ಬಚ್ಚನ್ ಮತ್ತು ಕುಟುಂಬಸ್ಥರು ತೀವ್ರ ದುಃಖದಲ್ಲಿದ್ದು, ಇಂದು ಸಂಜೆ ಪಾರ್ಥೀವ ಶರೀರ ಮನೆಗೆ ಆಗಮಿಸಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ :ಬಾಂದ್ರಾ ಚುನಾವಣಾ ಪ್ರಚಾರದ ವೇಳೆ ಶಿವಸೇನಾ ನಾಯಕನಿಗೆ ಇರಿತ! ಕಲ್ಲು ತೂರಾಟ

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು