ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ, ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರ ರಾಜಕಾರಣದಲ್ಲಿ ಇಂದು (ಏಪ್ರಿಲ್ 14, 2026) ಒಂದು ಮಹತ್ವದ ಯುಗ ಅಂತ್ಯವಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದು, ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ.

ತಮ್ಮ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ನಿತೀಶ್ ಕುಮಾರ್ ಅವರು ಬಿಹಾರದ ಜನತೆ ತಮಗೆ ನೀಡಿದ ಬೆಂಬಲವನ್ನು ನೆನೆದು ಭಾವುಕರಾದರು.ಬಿಹಾರದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ನಿತೀಶ್ ಕುಮಾರ್, ಇನ್ನು ಮುಂದೆ ಕೇಂದ್ರ ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ. ಅವರು ಶೀಘ್ರದಲ್ಲೇ ರಾಜ್ಯಸಭೆ ಪ್ರವೇಶಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Advertisement

ರಾಜೀನಾಮೆ ನೀಡಿದರೂ ಸಹ, ರಾಜ್ಯದ ಹಿತದೃಷ್ಟಿಯಿಂದ ಅಸ್ತಿತ್ವಕ್ಕೆ ಬರಲಿರುವ ಹೊಸ ಸರ್ಕಾರಕ್ಕೆ ತಮ್ಮ ಸಂಪೂರ್ಣ ಬೆಂಬಲ ಇರಲಿದೆ ಎಂದು ಅವರು ಘೋಷಿಸಿದ್ದಾರೆ.ನಿತೀಶ್ ಕುಮಾರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬಿಜೆಪಿಯ ಹಿರಿಯ ನಾಯಕ ಸಾಮ್ರಾಟ್ ಚೌಧರಿ ಅವರು ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತೆಯ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿ! ಮಗುವಿನ ದೇಹ ಒಂದು ಕಡೆ, ತಲೆ ತಾಯಿಯ ಗರ್ಭದೊಳಗೆ!

Advertisement

ಬಿಜೆಪಿಯ ಐತಿಹಾಸಿಕ ಸಾಧನೆ

ಬಿಹಾರದಲ್ಲಿ ಇದುವರೆಗೆ ಜೆಡಿಯು (JDU) ಅಥವಾ ಇತರ ಮೈತ್ರಿಕೂಟಗಳ ಬೆಂಬಲದೊಂದಿಗೆ ಅಧಿಕಾರದಲ್ಲಿದ್ದ ಬಿಜೆಪಿ, ಈಗ ಮೊದಲ ಬಾರಿಗೆ ತನ್ನದೇ ಪಕ್ಷದ ಮುಖ್ಯಮಂತ್ರಿಯನ್ನು ಹೊಂದುವ ಮೂಲಕ ರಾಜ್ಯದಲ್ಲಿ ಹೊಸ ಇತಿಹಾಸ ಬರೆದಿದೆ.

Advertisement

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು