ಬೆಂಗಳೂರು, ಏಪ್ರಿಲ್ 15 : 2016ರಲ್ಲಿ ನಡೆದ ಧಾರವಾಡ ಜಿಲ್ಲೆಯ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಕೊಲೆ ಹಾಗೂ ಸಂಚು ಆರೋಪಗಳಲ್ಲಿ ದೋಷಿ ಎಂದು ತೀರ್ಮಾನಿಸಿದೆ.
ಈ ಪ್ರಕರಣದಲ್ಲಿ ಒಟ್ಟು ಹಲವು ಆರೋಪಿಗಳ ವಿರುದ್ಧ ವಿಚಾರಣೆ ನಡೆದಿದ್ದು, ಸಿಬಿಐ ತನಿಖೆಯ ನಂತರ ಸಾಕ್ಷ್ಯಾಧಾರಗಳ ಆಧಾರದಲ್ಲಿ ನ್ಯಾಯಾಲಯವು ಈ ತೀರ್ಪು ನೀಡಿದೆ. ಆದರೆ, ಶಸ್ತ್ರಾಸ್ತ್ರ ಕಾಯ್ದೆ (Arms Act) ಅಡಿ ಆರೋಪಗಳಿಂದ ಕುಲಕರ್ಣಿ ಅವರನ್ನು ನ್ಯಾಯಾಲಯವು ವಿನಾಯಿತಿ ನೀಡಿದೆ.

ಇದನ್ನೂ ಓದಿ ಜಾಗತಿಕ ಉದ್ವಿಘ್ನತೆಯ ನಡುವೆ ವೇಗವಾಗಿ ಬೆಳೆಯುತ್ತಿರುವ ಭಾರತದ ಆರ್ಥಿಕತೆ!
ಯೋಗೇಶ್ ಗೌಡರನ್ನು 2016ರ ಜೂನ್ 15ರಂದು ಧಾರವಾಡದ ಜಿಮ್ ನಲ್ಲಿ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ರಾಜಕೀಯವಾಗಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು ಮತ್ತು ಬಳಿಕ ರಾಜ್ಯ ಸರ್ಕಾರದಿಂದ ಸಿಬಿಐಗೆ ಹಸ್ತಾಂತರಿಸಲಾಯಿತು.

ವಿಚಾರಣೆಯ ಅವಧಿಯಲ್ಲಿ ಪ್ರಕರಣದಲ್ಲಿ ಅನೇಕ ಕಾನೂನು ತಿರುವುಗಳು ಕಂಡುಬಂದಿದ್ದು, ಸಾಕ್ಷಿದಾರರ ಮೇಲೆ ಪ್ರಭಾವ ಬೀರುವ ಆರೋಪಗಳೂ ಕೇಳಿಬಂದಿದ್ದವು. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಕೂಡ ಕುಲಕರ್ಣಿ ಅವರಿಗೆ ನೀಡಿದ್ದ ಜಾಮೀನು ರದ್ದುಪಡಿಸಿತ್ತು.ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 16ರಂದು ಪ್ರಕಟಿಸುವುದಾಗಿ ತಿಳಿಸಿದೆ.
ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

