Breaking News

ಬೆಳಗಾವಿ: ಕಣ್ಣೆತ್ತಿ ನೋಡಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ

Another stabbing incident in New Gandhinagar Belgaum

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃನಾಳ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತನ ಮೇಲೆ ಚಾಕು ಇರಿತ ಪ್ರಕರಣ ನಡೆದಿತ್ತು. ಇದೀಗ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ವರದಿಯಾಗಿದೆ, ಇದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಬೆಳಗಾವಿಯ ನ್ಯೂ ಗಾಂಧಿನಗರದಲ್ಲಿ ಶುಕ್ರವಾರದ ನಮಾಜ್ ಮುಗಿಸಿ ಮಸೀದಿ ಮುಂಭಾಗದಿಂದ ಹೊರಬರುತ್ತಿದ್ದ ವ್ಯಕ್ತಿಯೊಬ್ಬನಿಗೆ, ಜಾಮೀನಿನ ಮೇಲೆ ಹೊರಬಂದಿದ್ದ ದುಷ್ಕರ್ಮಿಯೊಬ್ಬನು ಕಣ್ಣೆತ್ತಿ ನೋಡಿದ್ದಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಈ ಘಟನೆ ಸಾರ್ವಜನಿಕರನ್ನು ದಿಗ್ಭ್ರಮೆಗೊಳಿಸಿದೆ.

Advertisement

ಇದನ್ನೂ ಓದಿ: ಆಳವಾದ ಕಂದಕಕ್ಕೆ ಬಿದ್ದ ಬಸ್: 8 ಮಂದಿ ದುರ್ಮರಣ

ಬೆಳಗಾವಿಯ ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಶಾನ್ ಎಂಬ ಯುವಕನಿಗೆ ಮುಜಾಮಿಲ್ ಚಾಕು ಇರಿದ ಘಟನೆ ನಡೆದಿದೆ. ಆರೋಪಿ ಮುಜಮಿಲ್ ಸತ್ತಿಗೇರಿ ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು