ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ ಆಪೆ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಏ.15ರಂದು ಸಂಜೆ ನಡೆದಿದೆ.
ಮಂಚಿಯ ವಿಕಾಸ್ ಶಾಮಿಯಾನದಲ್ಲಿ ಕೆಲಸ ಮಾಡುತ್ತಿದ್ದ ಇರಾ ಗ್ರಾಮದ ಕುಕ್ಕಾಜೆ ನಿವಾಸಿ ಮನೀಶ್ (22) ಮೃತ ಯುವಕ.

ಸಾಲೆತ್ತೂರಿನಿಂದ ಕುಕ್ಕಾಜೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಆಪೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ಮನೀಶ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ, ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮಂಗಳೂರು ಭೀಕರ ರಸ್ತೆ ಅಪಘಾತ: ಚಿಕಿತ್ಸೆ ಫಲಿಸದೆ ನವ್ಯಾ ಸ್ಟುಡಿಯೋ ಮಾಲೀಕ ಮೋಹನ್ ಕುಮಾರ್ ನಿಧನ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮನೀಶ್ ಶಾಮಿಯಾನ ಕೆಲಸ ಮಾಡಿಕೊಂಡಿದ್ದು, ಮನೆಯ ಆಧಾರಸ್ತಂಭವಾಗಿದ್ದರು. ಅವರು ಕುಟುಂಬದ ಏಕೈಕ ಪುತ್ರರಾಗಿದ್ದರು ಎಂದು ತಿಳಿದುಬಂದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

