ದಕ್ಷಿಣ ಕನ್ನಡಕ್ಕೆ ಕೇಂದ್ರದ ಬಂಪರ್ ಕೊಡುಗೆ: NH 73 ಅಭಿವೃದ್ಧಿಗೆ 64 ಕೋಟಿ ರೂ. ಮಂಜೂರು; ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಾಹಿತಿ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಒಟ್ಟು 64 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಯಾವೆಲ್ಲಾ ಕಾಮಗಾರಿಗಳಿಗೆ ಅನುದಾನ?

Advertisement

ಬಿ.ಸಿ. ರೋಡ್‌-ಪುಂಜಾಲಕಟ್ಟೆ ರಸ್ತೆ: NH 73ರ ಬಿ.ಸಿ. ರೋಡ್‌ನಿಂದ ಪುಂಜಾಲಕಟ್ಟೆವರೆಗಿನ ಸುಮಾರು 20 ಕಿ.ಮೀ. ಹೆದ್ದಾರಿ ನಿರ್ವಹಣೆಗಾಗಿ 34.53 ಕೋಟಿ ರೂ. ಮಂಜೂರಾಗಿದೆ.

ಗಾಣದಪಡ್ಪು ಹೆದ್ದಾರಿ ಅಗಲೀಕರಣ: ಬಿ.ಸಿ. ರೋಡ್‌ ಜಂಕ್ಷನ್‌ನಿಂದ ಬಂಟ್ವಾಳದ ಶ್ರೀ ನಾರಾಯಣಗುರು ಮಂದಿರದವರೆಗಿನ ರಸ್ತೆಯನ್ನು ಚತುಷ್ಪಥ (ನಾಲ್ಕು ಪಥ) ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು 22.59 ಕೋಟಿ ರೂ. ನೀಡಲಾಗಿದೆ.

Advertisement

ಚಾರ್ಮಾಡಿ ಘಾಟಿ ನಿರ್ವಹಣೆ: ಬಿ.ಸಿ. ರೋಡ್‌ ಜಂಕ್ಷನ್‌ ಹಾಗೂ ಚಾರ್ಮಾಡಿ ಘಾಟಿ ಭಾಗದಲ್ಲಿ ರಸ್ತೆ ನಿರ್ವಹಣೆ ಕಾಮಗಾರಿಗಳಿಗಾಗಿ 6.92 ಕೋಟಿ ರೂ. ಅನುದಾನ ದೊರೆತಿದೆ

ಇದನ್ನೂ ಓದಿ: ರಾಜ್ಯದ ಜನತೆಗೆ ಕರಂಟ್ ಶಾಕ್: ಪ್ರತಿ ಯೂನಿಟ್ ವಿದ್ಯುತ್ ದರ 56 ಪೈಸೆ ಏರಿಕೆ; ಮೇ ತಿಂಗಳಿನಿಂದ ಹೊಸ ದರ ಜಾರಿ!

‘ವಿಕಸಿತ ದಕ್ಷಿಣ ಕನ್ನಡ’ ನಿರ್ಮಾಣದ ಗುರಿ:

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಸಂಸದರು, “ಈ ಹೆದ್ದಾರಿಗಳ ಅಭಿವೃದ್ಧಿಯಿಂದ ಜಿಲ್ಲೆಯ ಸುಗಮ ಸಂಚಾರ ಹಾಗೂ ಆರ್ಥಿಕ ಪ್ರಗತಿಗೆ ವೇಗ ಸಿಗಲಿದೆ. ಇದು ‘ವಿಕಸಿತ ದಕ್ಷಿಣ ಕನ್ನಡ’ ನಿರ್ಮಾಣದ ಹಾದಿಯಲ್ಲಿ ಪ್ರಮುಖ ಮೈಲಿಗಲ್ಲು” ಎಂದು ಹೇಳಿದ್ದಾರೆ. ಅಲ್ಲದೆ, ಅನುದಾನ ನೀಡಿದ ಪ್ರಧಾನಿ ಮೋದಿ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಉಜಿರೆ-ಧರ್ಮಸ್ಥಳ ರಸ್ತೆ ಕಾಮಗಾರಿ ಪ್ರಗತಿಯಲ್ಲಿ:

ಇದೇ ವೇಳೆ, ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿಯನ್ನು ಸುಮಾರು 613.66 ಕೋಟಿ ರೂ. ವೆಚ್ಚದಲ್ಲಿ ದ್ವಿಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಕೂಡ ಭರದಿಂದ ಸಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ

 

 

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು