ಪುತ್ತೂರು: ಭೀಕರ ಬೈಕ್ ಅಪಘಾತ; ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ, 21 ವರ್ಷದ ಯುವಕ ಸ್ಥಳದಲ್ಲೇ ಸಾವು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡೀಲ್ ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 21 ವರ್ಷದ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಅಪಘಾತದ ಭಯಾನಕ ದೃಶ್ಯಗಳು ಹತ್ತಿರದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ನಿವಾಸಿ ಧನರಾಜ್ (21) ಎಂದು ಗುರುತಿಸಲಾಗಿದೆ.

ಧನರಾಜ್ ಅವರು ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಪಡೀಲ್ ಎಂಬಲ್ಲಿಗೆ ತಲುಪಿದಾಗ ಬೈಕ್ ಹಠಾತ್ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿದ್ದ ಬೈಕ್ ನೇರವಾಗಿ ಡಿವೈಡರ್ ಹತ್ತಿ, ಅಲ್ಲಿನ ವಿದ್ಯುತ್ ದೀಪದ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ.

Advertisement

ಇದನ್ನೂ ಓದಿ: ರಾಜ್ಯದ ಜನತೆಗೆ ಕರಂಟ್ ಶಾಕ್: ಪ್ರತಿ ಯೂನಿಟ್ ವಿದ್ಯುತ್ ದರ 56 ಪೈಸೆ ಏರಿಕೆ; ಮೇ ತಿಂಗಳಿನಿಂದ ಹೊಸ ದರ ಜಾರಿ!

ಡಿಕ್ಕಿಯ ತೀವ್ರತೆಗೆ ಬೈಕ್ ಡಿವೈಡರ್ ದಾಟಿ ಎದುರು ಭಾಗದಿಂದ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಸವಾರ ಮತ್ತು ಸಹಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಧನರಾಜ್ ಅವರು ಅಪಘಾತದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು