ತುಮಕೂರು: ರಸ್ತೆ ಅಪಘಾತದಲ್ಲಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಮೃತ ದುರ್ದೈವಿಗಳಲ್ಲಿ ಏಳು ವರ್ಷದ ಬಾಲಕಿಯೂ ಸೇರಿದ್ದಾಳೆ.
ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಬೆಳಗ್ಗೆ 5 ಗಂಟೆ ಸುಮಾರಿಗೆ ಅವರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವು ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಆಳವಾದ ಕಂದಕಕ್ಕೆ ಬಿದ್ದ ಬಸ್: 8 ಮಂದಿ ದುರ್ಮರಣ
ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಪಘಾತಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೃತ ದುರ್ದೈವಿಗಳೆಲ್ಲರೂ ಯಲಬುರ್ಗಾ ಮೂಲದವರಾಗಿದ್ದು, ಪ್ರವಾಸಕ್ಕೆ ತೆರಳಿದಾಗ ಈ ದುರ್ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

