ಪುತ್ತೂರು: ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಪುತ್ತೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಅವರಿಗೆ ಸಮರ್ಪಿಸಲಾಗುವ ‘ಗುರುವಂದನಾ’ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಲು ಏಪ್ರಿಲ್ 21ರಂದು ಸಂಜೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಇಂದು ಸಂಜೆ 3:00 ಗಂಟೆಗೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ನಡೆಯಿತು.
ಇದನ್ನೂ ಓದಿ: ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

ಗುರುವಂದನಾ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಶೃಂಗೇರಿ ಜಗದ್ಗುರುಗಳ ಶಿಷ್ಯವೃಂದ ಹಾಗೂ ಸಾರ್ವಜನಿಕ ಭಕ್ತಾದಿಗಳು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಕೋರಲಾಗಿದೆ.
ಜಗದ್ಗುರುಗಳ ಈ ಪವಿತ್ರ ಭೇಟಿಯು ಮೇ ತಿಂಗಳಿನಲ್ಲಿ ಜರುಗಲಿದ್ದು, ಪ್ರಮುಖ ಕಾರ್ಯಕ್ರಮಗಳು ಈ ಕೆಳಗಿನಂತಿವೆ:

ಮೇ 6: ಸಂಜೆ ಜಗದ್ಗುರುಗಳು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ.
ಮೇ 7: ಸಾರ್ವಜನಿಕ ಅಭಿವಂದನಾ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಲಿದೆ.
ಜಂಟಿ ಆಶ್ರಯದಲ್ಲಿ ಸಿದ್ಧತೆ:
ಹಿಂದೂ ಸಮಾಜದ ಸಮಸ್ತ ಸಮುದಾಯಗಳನ್ನು ಒಳಗೊಂಡ ಗುರುವಂದನಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಈಗಾಗಲೇ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಇಡೀ ಪುತ್ತೂರಿನ ಭಕ್ತ ಸಮೂಹವು ಜಗದ್ಗುರುಗಳ ಸ್ವಾಗತಕ್ಕೆ ಸಜ್ಜಾಗುತ್ತಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

