ಹುಬ್ಬಳ್ಳಿ: ಮೈ ಜುಂ ಎನ್ನಿಸುವ ಭೀಕರ ಅಪಘಾತ; ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ರುಂಡವೇ ಕಟ್!

ಹುಬ್ಬಳ್ಳಿ: ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ನಿನ್ನೆ ಸಂಜೆ ಅತ್ಯಂತ ಭಯಾನಕ ರಸ್ತೆ ಅಪಘಾತವೊಂದು ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯೊಬ್ಬರ ರುಂಡವು ದೇಹದಿಂದ ಬೇರ್ಪಟ್ಟು ಕಾರಿನ ಇಂಜಿನ್ ಒಳಗೆ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಇನ್ನು ಮೃತರನ್ನು ಶೆರೆವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ (32).

ತಾಂತ್ರಿಕ ದೋಷದಿಂದಾಗಿ ಜೆಸಿಬಿ (JCB) ವಾಹನವೊಂದು ರಸ್ತೆ ಬದಿಯಲ್ಲಿ ಕೆಟ್ಟು ನಿಂತಿತ್ತು. ಸದಾನಂದ ಅವರು ಜೆಸಿಬಿಯ ಕೆಳಗೆ ಬಾಗಿ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಕುಂದಗೋಳ ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಸದಾನಂದ ಅವರಿಗೆ ಡಿಕ್ಕಿ ಹೊಡೆದಿದೆ.

Advertisement

ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಸದಾನಂದ ಅವರ ರುಂಡವು ದೇಹದಿಂದ ಸಂಪೂರ್ಣವಾಗಿ ಕತ್ತರಿಸಲ್ಪಟ್ಟಿದೆ. ಕತ್ತರಿಸಿದ ರುಂಡವು ಕಾರಿನ ಮುಂಭಾಗದ ಬಾನೆಟ್ ಸೀಳಿಕೊಂಡು ಇಂಜಿನ್ ಒಳಗೆ ಹೋಗಿ ಸಿಲುಕಿಕೊಂಡಿದೆ. ಈ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ತಲವಾರ್, ರಾಡ್‌ನಿಂದ ಮಾರಾಮಾರಿ; ರಕ್ತಸಿಕ್ತ ಕಾದಾಟ!

Advertisement

ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನ ಇಂಜಿನ್‌ನಲ್ಲಿ ಸಿಲುಕಿದ್ದ ರುಂಡವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು