ಪುತ್ತೂರು: ಲವ್ ಮಾಡಿ ಮಗು ಕರುಣಿಸಿದ ಪ್ರಕರಣ: ಸಂತ್ರಸ್ತೆಯನ್ನು ವಿವಾಹವಾಗಲು ಕೃಷ್ಣನಿಗೆ ಹೈಕೋರ್ಟ್ ಸೂಚನೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಮಗು ಕರುಣಿಸಿ ವಂಚಿಸಿದ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್, ಸಂತ್ರಸ್ತೆಯನ್ನು ವಿವಾಹವಾಗುವಂತೆ ಆರೋಪಿತ ಕೃಷ್ಣನಿಗೆ ಸೂಚಿಸಿದೆ.

ತನ್ನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕೃಷ್ಣ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಮಹತ್ವದ ಸಲಹೆ ನೀಡಿದೆ.

Advertisement

ಪ್ರಕರಣದ ಹಿನ್ನೆಲೆ:

ಕೃಷ್ಣ ಜೆ. ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದನು. ಈ ವೇಳೆ ಯುವತಿ ಗರ್ಭವತಿಯಾಗಿದ್ದು, ಮದುವೆಗೆ ಒತ್ತಾಯಿಸಿದಾಗ ಕೃಷ್ಣ ರಾವ್ ನಿರಾಕರಿಸಿದ್ದನು ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕೃಷ್ಣ ರಾವ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು.

Advertisement

ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೃಷ್ಣ ರಾವ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ತಲವಾರ್, ರಾಡ್‌ನಿಂದ ಮಾರಾಮಾರಿ; ರಕ್ತಸಿಕ್ತ ಕಾದಾಟ!

ಹೈಕೋರ್ಟ್ ನೀಡಿದ ಸಲಹೆಗಳೇನು?

ಈ ಪ್ರಕರಣದ ಸೂಕ್ಷ್ಮತೆಯನ್ನು ಗಮನಿಸಿದ ಹೈಕೋರ್ಟ್, ಸಂತ್ರಸ್ತ ಯುವತಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೃಷ್ಣ ರಾವ್ ಅವರಿಗೆ ಕಠಿಣ ಪ್ರಶ್ನೆಗಳನ್ನು ಹಾಕಿದೆ. “ಗರ್ಭವತಿಯಾಗಿರುವ ಸಂತ್ರಸ್ತ ಯುವತಿಯನ್ನು ವಿವಾಹವಾಗುವುದು ಮತ್ತು ಆಕೆಗೆ ಸಾಮಾಜಿಕ ಘನತೆ ತಂದುಕೊಡುವುದು ಈ ಸಮಸ್ಯೆಗೆ ಇರುವ ಅತ್ಯುತ್ತಮ ಪರಿಹಾರ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಮೂಲಕ ಮದುವೆಯಾಗುವ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಸೂಚನೆ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು